ಜಿಲ್ಲೆ

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯ

ಬೇಲೂರು: ತಾಲೂಕಿನ ಹಾರೋಹಳ್ಳಿ ತಿರುವು ರಸ್ತೆಯಲ್ಲಿ ಸೋಮವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಕಲ್ಲಿಗೆ ಗುದ್ದಿ ನಂತರ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕಾರಿನಲ್ಲಿ ಮೂಡಿಗೆರೆಯಿಂದ ಬೇಲೂರು ಮೂಲಕ ಬೆಂಗಳೂರಿಗೆ ವೇಗವಾಗಿ ತೆರಳುತ್ತಿದ್ದ ಸಂದರ್ಭ ತಾಲೂಕಿನ ಹಾರೋಹಳ್ಳಿ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಲ್ಲಿಗೆ ಗುದ್ದಿ ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಬ್ಬರಿಗೆ ಕೈ ತುಂಡಾಗಿದ್ದು, ಮತ್ತೊಬ್ಬರಿಗೆ ಕಾಲು ಮುರಿದಿದೆ. ಉಳಿದಂತೆ ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದೆ. ಬೇಲೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿದರು.