ಅರಕಲಗೂಡು ತಾಲೂಕಿನ ಮರಡಿ ಗ್ರಾಮದಲ್ಲಿ ಸೋಮವಾರ ನಡೆದ ಸಮುದಾಯ ಆಧಾರಿತ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜನರ ಆರೋಗ್ಯ ತಪಾಸಣೆ ನಡೆಸಲಾಯಿತು. 
ಜಿಲ್ಲೆ

ಮರಡಿ ಗ್ರಾಮದಲ್ಲಿ ಆರೋಗ್ಯ ಶಿಬಿರ

ಅರಕಲಗೂಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಡ್ಡರಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ತಾಲೂಕಿನ ಮರಡಿ ಗ್ರಾಮದಲ್ಲಿ ಇತ್ತೀಚೆಗೆ ಸಮುದಾಯ ಆಧಾರಿತ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ಮಾತನಾಡಿ, ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂಬ ಉದ್ದೇಶದಿಂದ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಜನರು ಈ ಶಿಬಿರದ ಉಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.


ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಮಾಜಿ ಉಪಾಧ್ಯಕ್ಷ ಉಪೇಂದ್ರ, ವೈದ್ಯರಾದ ಡಾ.ಸುರೇಶ್, ಡಾ.ವಾಸ್ತವಿ, ಡಾ.ಅಬ್ದುಲ್, ಆಪ್ತಸಮಾಲೋಚಕ ಪರಶುರಾಮ ಶಿರೂರ ಇತರರು ಇದ್ದರು.