ಯಾದಗಿರಿ: ಜಿಲ್ಲೆಯಲ್ಲಿ ಖನಿಜ ಸಾಗಾಣಿಕೆಗೆ ವಾಹನಗಳಿಗೆ ಕಡ್ಡಾಯವಾಗಿ ಒನ್ ಸ್ಟೇಟ್ ಒನ್ ಜಿಪಿಎಸ್ ಯೋಜನೆಯಡಿ ಜಿಪಿಎಸ್ ಅಳವಡಿಸಿ ಈ ಮೂಲಕ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಸಿದ ಅಧಿಕಾರಿಗಳಿಗೆ ಜಿಲ್ಲಾಕಾರಿ ಸ್ನೇಹಲ್ ಆರ್., ಖಡಕ್ ನಿದರ್ೇಶನ ಮಾಡಿದ್ದಾರೆ.
ಇಲ್ಲಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ತರಹದ ಖನಿಜ ಸಾಗಾಣಿಕೆ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಒಂದು ವೇಳೆ ಈ ನಿಯಮ ಪಾಲಿಸದಿದ್ದಲ್ಲಿ ಅಂಥ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಪರವಾನಿಗೆ ರದ್ದು ಮಾಡಿ ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 84 ಖನಿಜ ಸಾಗಾಣಿಕೆ ಮಾಡುವ ವಾಹನಳಿವೆ. ಇದರಲ್ಲಿ 28 ವಾಹನಗಳಿಗೆ ಜಿಪಿಎಸ್ ಅಳವಡಿಕೆಯಿದೆ. ಇನ್ನುಳಿದ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಸೂಚನೆ ನೀಡಬೇಕು. ಸಕರ್ಾರದ ಮಾರ್ಗಸೂಚಿಯಂತೆ ಜೂನ್ ತಿಂಗಳಿಂದ ಅಕ್ಟೋಬರ್ವರೆಗೆ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಅವಕಾಶವಿಲ್ಲ. ಯಾವುದೇ ರೀತಿಯ ಮರಳು ಗಣಿಗಾರಿಕೆ ಚಟುವಟಿಕೆಗಳು ಕಂಡುಬಂದರೆ ಸಂಬಂಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮರಳನ್ನು ಲೋಕೋಪಯೋಗಿ ಇಲಾಖೆಯಿಂದ ವಿಲೇವಾರಿ ಮಾಡಿಸಬೇಕು. ವಡಿಗೇರಾ ತಾಲೂಕಿನ ಯಕ್ಷಂತಿ, ಚನ್ನೂರ್, ಕೊಂಕಲ್, ಕುಮನೂರ, ಗಡ್ಡೆಸೂಗೂರು, ಶಿವಪುರ, ಗೋನಾಲ, ಯಾದಗಿರಿ ತಾಲೂಕಿನ ಕೌಳೂರು, ಸುರಪುರ ತಾಲೂಕಿನ ಸೂಗೂರು, ಹೆಮ್ಮಡಗಿ, ಚೌಡೇಶ್ವರಿಹಾಳ, ಹೇಮನೂರ, ಶೆಳ್ಳಗಿ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಒಟ್ಟು 14 ಮರಳು ಬ್ಲಾಕ್ಗಳನ್ನು ಹಟ್ಟಿ ಚಿನ್ನದ ಗಣಿ ಕಂಪನಿಗೆ ನೀಡಲಾಗಿದೆ ಎಂದು ಅಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಪಮರ್ಿಟ್ ಇಲ್ಲದ ಮರಳು ಸಾಗಾಣಿಕೆ, ಮಿತಿಮೀರಿದ ಭಾರ ಹೊತ್ತು ಸಾಗುವ ವಾಹನಗಳ ಮೇಲೆ ತೀವ್ರ ನಿಗಾವಹಿಸಿ. ಪ್ರತಿಯೊಂದು ವಾಹನಗಳ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಒಂದುವೇಳೆ ಸೂಕ್ತ ದಾಖಲಾತಿ ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ವಾಹನ ಬಳಕೆಗೆ ಅವಕಾಶ ನೀಡಬಾರದು ಎಂದು ಡಿಸಿ ಸೂಚಿಸಿದರು.