ಮುದ್ದೇಬಿಹಾಳ ಶಿಕ್ಷಕರ ವರ್ಗಾವಣೆಯಲ್ಲಿ ಜಿಪಿಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆದ ಅನ್ಯಾಯವನ್ನು ಸರಿಪಡಿಸಿ ಮರು ಕೌನ್ಸಿಲಿಂಗ್ ನಡೆಸಬೇಕೆಂದು ಒತ್ತಾಯಿಸಿ ಜಿಪಿಟಿ ಶಿಕ್ಷಕರ ಸಂಘದಿಂದ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. 
ಜಿಲ್ಲೆ

ಮರು ಕೌನ್ಸಿಲಿಂಗ್ ನಡೆಸಲು ಒತ್ತಾಯ

ಮುದ್ದೇಬಿಹಾಳ: ಇತ್ತೀಚಿಗೆ ಜರುಗಿದ ಶಿಕ್ಷಕರ ವರ್ಗಾವಣೆಯಲ್ಲಿ ಜಿಪಿಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆದ ಅನ್ಯಾಯವನ್ನು ಸರಿಪಡಿಸಿ ಮರು ಕೌನ್ಸಿಲಿಂಗ್ ನಡೆಸಬೇಕೆಂದು ಒತ್ತಾಯಿಸಿ ಜಿಪಿಟಿ ಶಿಕ್ಷಕರ ಸಂಘ ಪದಾಧಿಕಾರಿಗಳು ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಖಜಾಂಚಿ ಸಿದ್ದನಗೌಡ ಕಾಶಿನಕುಂಟಿ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಪಿಟಿ ಶಿಕ್ಷಕರಿಗೆ ಅವಕಾಶ ಕಲ್ಪಿಸಿದ್ದಾರೆ. ಆದರೆ ಜಿಲ್ಲೆಯಲ್ಲಿ ಮಾತ್ರ ವಂಚಿತರಾಗಿದ್ದೇವೆ. ಶಿಕ್ಷಣ ಮಂತ್ರಿಗಳಿಗೆ ಹಾಗೂ ಸರ್ಕಾರದ ಗಮನಕ್ಕೆ ತಂದು ಮರು ಕೌನ್ಸಿಲಿಂಗ್ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಶಾಸಕರು ಶೀಘ್ರದಲ್ಲೇ ಶಿಕ್ಷಣ ಮಂತ್ರಿಗಳಿಗೆ ಹಾಗೂ ಸರ್ಕಾರದ ಗಮನಕ್ಕೆ ಈ ವಿಷಯವನ್ನು ತಂದು ಜಿಲ್ಲೆಯ ಜಿಪಿಟಿ ಶಿಕ್ಷಕರಿಗಾದ ಅನ್ಯಾಯವನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಸಂಘದ ಪದಾಧಿಕಾರಿಗಳಾದ ಮಹಮ್ಮದ್‌ಹನೀಫ್ ಮಾಗಿ, ಶಿವಾನಂದ ಬೇಲಾಳ, ಚಿದಂಬರ್ ಗುರ್ಮಿ, ಶರಣು ಅನಿ, ಬಸವರಾಜ ಬಿರಾದಾರ, ಮಂಜುನಾಥ ಮೂರ್ತಿ ಇತರರಿದ್ದರು.