ಚಿತ್ರದುರ್ಗ: ಮಲೇರಿಯಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಹತೋಟಿ ಮತ್ತು ನಿರ್ಮೂಲನೆಗಾಗಿ ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಗುಣಮಟ್ಟದ ಜ್ವರ ಸಮೀಕ್ಷೆ ಹಾಗೂ ರಕ್ತ ಪರೀಕ್ಷೆ ಮಾಡಬೇಕೆಂದು ಡಿಎಚ್‌ಒ ಡಾ.ಜಿ.ಪಿ ರೇಣುಪ್ರಸಾದ್ ಆಶಾ ಕಾರ‌್ಯಕರ್ತೆಯರಿಗೆ ಸೂಚಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ 2 ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಜಿಲ್ಲಾ ನೋಡಲ್ ಅಧಿಕಾರಿ ಡಾ.ಪದ್ಮಾ ಮಾತನಾಡಿದರು. ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಶಿ, ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಕಡಿ, ಡಿಎಂಒ ಕಚೇರಿಯ ಆರೋಗ್ಯ ಮೇಲ್ವಿಚಾರಕ ಟಿ.ಮಲ್ಲಿಕಾರ್ಜುನ್, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿಗಳಾದ ಶ್ರೀನಿವಾಸ, ಬಿ.ಆರ್.ನಾಗರಾಜ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಚ್.ಎ.ನಾಗರಾಜ್, ಲೋಕೇಶ, ಪಾಂಡು ಇತರರಿದ್ದರು.