ಜಿಲ್ಲೆ

ಮಲ್ಪೆಯಲ್ಲಿ ಪ್ರವಾಸೀ ಬೋಟ್ ಚಟುವಟಿಕೆ ತಾತ್ಕಾಲಿಕ ಸ್ಥಗಿತ

ಉಡುಪಿ: ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸೀ ಬೋಟ್  ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು  ಮೇ 16 ರಿಂದ ಸೆಪ್ಟಂಬರ್ 15 ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.