ಜಿಲ್ಲೆ

ಮಲ್ಲಿಕಾರ್ಜುನ ಮುತ್ಯಾ ಜನ್ಮೋತ್ಸವ 16ರಂದು

ಕಲಬುರಗಿ: ಶಹಾಪುರ ತಾಲೂಕಿನ ಮಹಲ್‌ರೋಜದ ಶ್ರೀ ಮಲ್ಲಿಕಾರ್ಜುನ ಮುತ್ಯಾ ಅವರ ಜನ್ಮದಿನೋತ್ಸವವನ್ನು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೋಮವಾರ ಮಧ್ಯಾಹ್ನ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕೆಕೆಆರ್‌ಟಿಸಿ ಮಾಜಿ ಅಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದರು.
ಸರ್ವಧರ್ಮ ಸಮಾನತೆಯನ್ನು ಸಾರುತ್ತಿರುವ ಪೂಜ್ಯರು ಈ ಭಾಗದಲ್ಲಿ ಯುವಕರಲ್ಲಿ ಧರ್ಮ ಜಾಗೃತಿ ಮೂಡಿಸುತ್ತಿದ್ದಾರೆ. ಜನ್ಮದಿನೋತ್ಸವದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯ ಕೋಲಿ ಕಬ್ಬಲಿಗ ಎಸ್‌ಟಿ ಹೋರಾಟ ಸಮಿತಿ ಅಧ್ಯಕ್ಷ ಲಚ್ಚಪ್ಪ ಜಮಾದಾರ ಮಾತನಾಡಿ, ಜನ್ಮದಿನೋತ್ಸವದಲ್ಲಿ ಜಗದ್ಗುರು ಶ್ರೀ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಡಾ.ಮಲ್ಲಣಪ್ಪ ಸ್ವಾಮೀಜಿ, ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸೇರಿ ವಿವಿಧ ಪೂಜ್ಯರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ್, ಶರಣಬಸಪ್ಪ ದರ್ಶನಾಪುರ, ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್ ಸೇರಿ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ವಿಶೇಷ ಸನ್ಮಾನ: ಸಂಸದ ರಾಧಾಕೃಷ್ಣ ದೊಡ್ಡಮನಿ, ರಾಯಚೂರು ಸಂಸದ ಜಿ.ಕುಮಾರ ನಾಯಕ, ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ, ಮೀನುರಾಗಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಎಂಎಲ್‌ಸಿ ಜಗದೇವ ಗುತ್ತೇದಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವಿಂದ್ರಪ್ಪ ಮರತೂರಕರ್, ಕೂಡಾ ಅಧ್ಯಕ್ಷ ಮಜರ್ ಅಲಂಖಾನ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪ್ರಮುಖರಾದ ಪಿಂಟು ಜಮಾದಾರ, ಶಿವು ಧಣಿ, ರಾಮಲಿಂಗ ನಾಟೀಕಾರ, ಮಲ್ಲಿಕಾರ್ಜುನ ಗುಡಬಾ, ಅಂಬಾರಾಯ, ದೇವಿಂದ್ರ ಗೋಳಾ, ಸತೀಶ ತೆಗ್ಗೆಳ್ಳಿ ಇತರರಿದ್ದರು.