ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಅಧ್ಯಕ್ಷ ರಂಗಸ್ವಾಮಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಮನವಿ ನೀಡಿದರು. 
ಜಿಲ್ಲೆ

ಮಲ್ಲಿಪಟ್ಟಣ ಗ್ರಾಪಂ ಕಚೇರಿಗೆ ಎಂಎಲ್ಸಿ ಸೂರಜ್ ರೇವಣ್ಣ ಭೇಟಿ

ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಭೇಟಿ ನೀಡಿ ಅಹವಾಲು ಆಲಿಸಿದರು.


ಗ್ರಾಪಂ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಮಾತನಾಡಿ, ಮಲ್ಲಿಪಟ್ಟಣ ಸಮುದಾಯ ಭವನದ ಅಭಿವೃದ್ಧಿಗೆ ಹಾಗೂ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು. ನೆಲಬಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡಕ್ಕೆ ಹಾಗೂ ಶಿರದನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಕಾಂಪೌಂಡ್ ಕಟ್ಟಲು ಅನುದಾನ ನೀಡಬೇಕು ಎಂದು ಮನವಿ ಮಾಡಿದರು.


ಗ್ರಾಪಂ ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ಸುಮಿತ್ರಮ್ಮ, ಯಶೋದಮ್ಮ, ಲಲಿತಾ ವೇದಮೂರ್ತಿ, ಪೂಜಾ ರಂಗಸ್ವಾಮಿ, ಚಂದ್ರೇಗೌಡ, ಪ್ರಕಾಶ್, ಪಿಡಿಒ ಅರುಣ್‌ಕುಮಾರ್, ಕಾರ್ಯದರ್ಶಿ ಕೃಷ್ಣೇಗೌಡ ಇದ್ದರು.