ಎಂ.ಸಿ.ಹಳ್ಳಿಯಲ್ಲಿ ಆಯೋಜಿಸಿದ್ದ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಹನುಮಂತಪ್ಪ ಮಾತನಾಡಿದರು. ರೇಣುಕಾ, ಮಂಜುಳಾ, ರಮೇಶ್, ಸಂತೋಷ್ ಇತರರಿದ್ದರು.  
ಜಿಲ್ಲೆ

ಮಳೆನೀರು ಕೊಯ್ಲು ಅಗತ್ಯ

ತರೀಕೆರೆ: ಮಳೆನೀರು ಕೊಯ್ಲು, ಜಲಮೂಲ ಸಂರಕ್ಷಣೆ ಮಾಡುವುದು ಅಗತ್ಯ ಎಂದು ಕೃಷಿ ಅಧಿಕಾರಿ ಹನುಮಂತಪ್ಪ ಹೇಳಿದರು.

ಎಂ.ಸಿ.ಹಳ್ಳಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಏರ್ಪಡಿಸಿದ್ದ ಕೃಷಿ ವಿಸ್ತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಗಾಗ ಎದುರಾಗುವ ಅನಾವೃಷ್ಟಿಯಿಂದ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ರೈತರು ಮಳೆನೀರು ಕೊಯ್ಲು, ತೆರೆದ ಮತ್ತು ಕೊಳವೆ ಬಾವಿಗಳ ಮರುಪೂರಣ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಬ್ಸಿಡಿ ಪಡೆದುಕೊಳ್ಳಬೇಕು. ಸಹಾಯಧನದ ಮೂಲಕ ಜಮೀನುಗಳಲ್ಲಿ ಚೆಕ್ ಡ್ಯಾಂ ನಿರ್ಮಿಸಿಕೊಳ್ಳಬೇಕು. ಉದ್ಯೋಗ ಖಾತ್ರಿ ಯೋಜನೆ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟ ಅಧ್ಯಕ್ಷೆ ರೇಣುಕಾ, ಉಪಾಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ನೂರ್‌ಜಾನ್, ಯೋಜನೆ ಮೇಲ್ವಿಚಾರಕ ರಮೇಶ್, ತಾಲೂಕು ಕೃಷಿ ಮೇಲ್ವಿಚಾರಕ ಸಂತೋಷ್ ಇತರರಿದ್ದರು.