ಚಾಮರಾಜನಗರ:ರಾಜ್ಯ ಸರ್ಕಾರ ಮಹರ್ಷಿ ವಾಲ್ಮೀಕಿ, ಶ್ರೀಭಗೀರಥ ಹಾಗೂ ಶ್ರೀಕನಕದಾಸರ ಪ್ರತಿಮೆ ನಿರ್ಮಾಣಕ್ಕೆ 1.50 ಕೋಟಿ ರೂ, ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ ಎಂದು ತಾಲೂಕು ವಿದ್ಯಾ ಅಭಿವೃದ್ಧಿ ನಾಯಕರ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ್‌ನಾಯಕ ಮಾಹಿತಿ ನೀಡಿದರು.
ಕಳೆದ ವರ್ಷ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಜಿಲ್ಲಾಡಳಿತ ಆವರಣದಲ್ಲಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಬೇಡಿಕೆಯಾಗಿತ್ತು. ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸದೇ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಮುದಾಯ ಮುಖಂಡರು ತೀರ್ಮಾನ ತೆಗೆದುಕೊಂಡಿದ್ದೇವು. ಅದರಂತೆ ಎಲ್ಲಾ ಪಕ್ಷದ ಸಮುದಾಯದ ಮುಖಂಡರನ್ನು ಒಳಗೊಂಡಂತೆ ಗಡಿ, ಕಟ್ಟೆ, ವಿವಿಧ ಗ್ರಾಮದ ಯಜಮಾನರು, ಕುಲಸ್ಥರು ಸೇರಿ ವಾಲ್ಮೀಕಿ ಜಯಂತಿಯನ್ನು ಮಾಡುವ ಮೂಲಕ, ಜಿಲ್ಲಾಡಳಿತ ಭವನದ ಆವರಣದಲ್ಲಿ ಗುದ್ದಲಿ ಪೂಜೆ ನೆರವೇರಿಸಲು ಮುಂದಾಗಿದ್ದೇವು. ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ಮಾಡಿಕೊಡದೇ ಪುತ್ಥಳಿ ನಿರ್ಮಾಣದ ಭರವಸೆ ನೀಡಿತ್ತು. ಪ್ರಸ್ತುತ ರಾಜ್ಯ ಸರ್ಕಾರ ವಾಲ್ಮೀಕಿ ಪ್ರತಿಮೆ ಜತೆಗೆ, ಶ್ರೀಭಗೀರಥ ಮತ್ತು ಶ್ರೀಕನಕದಾಸರ ಪ್ರತಿಮೆ ನಿರ್ಮಾಣಕ್ಕೆ ತಲಾ 50 ಲಕ್ಷ ರೂ, ಅನುದಾನ ನೀಡಿ ಆದೇಶ ಹೊರಡಿಸಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಯಕ ಸಮುದಾಯ ಒಗ್ಗಟ್ಟಾಗಿ ಹೋರಾಟ ಮಾಡಿದ ಲವಾಗಿ ಪ್ರತಿಲ ದೊರಕಿದೆ. ಮಹನೀಯರ ಪ್ರತಿಮೆ ನಿರ್ಮಾಣಕ್ಕೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಡಳಿತ, ಜಿಲ್ಲಾಧಿಕಾರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಹಾಗೂ ಸಮುದಾಯದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು ಮಾತನಾಡಿ, ಜಿಲ್ಲಾಡಳಿ ಭವನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ, ಶ್ರೀಭಗೀರಥ ಹಾಗೂ ಶ್ರೀಕನಕದಾಸರ ಪ್ರತಿಮೆ ನಿರ್ಮಿಸಲು ಮುಂದಾಗಿರುವುದು ಸ್ವಾಗತಾರ್ಹ. ಕೂಡಲೇ ಜಿಲ್ಲಾಡಳಿತ ಸೂಕ್ತ ಜಾಗವನ್ನು ಗುರುತಿಸಿ ಆದಷ್ಟು ಬೇಗ ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಸುರೇಶ್, ಸಮುದಾಯದ ಮುಖಂಡರಾದ ಸೋಮು, ವೆಂಕಟೇಶ್, ಚಂಗುಮಣಿ, ಮಹೇಶ್ ಹಾಜರಿದ್ದರು.