ಮೈಸೂರು: ಜಿಲ್ಲಾಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಹರ್ಷಿ ಪಬ್ಲಿಕ್ ಶಾಲೆ ತಂಡ ಪ್ರಥಮ ಸ್ಥಾನ ಗಳಿಸಿದೆ.
ತಂಡದ ನಾಯಕ ಮನೀಶ್ ಉತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದ ಥ್ರೋಬಾಲ್ ಸ್ಪರ್ಧೆಯಲ್ಲಿ ಈ ಶಾಲೆಯ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಎಂ.ಭುವನಾ, ಖುಷ್ಬು ಉತ್ತಮ ಆಟಗಾರ್ತಿ ಪ್ರಶಸ್ತಿ ಪಡೆದರು.