ಬಾಗಲಕೋಟೆ ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಶ್ರೀನಿವಾಸ ನರಗುಂದ ಮಾತನಾಡಿದರು.  
ಜಿಲ್ಲೆ

ಮಹರ್ಷಿ ವಾಲ್ಮೀಕಿ ಕೊಡುಗೆ ಸ್ಮರಿಸಿರಿ

ಬಾಗಲಕೋಟೆ: ಸಂಸ್ಕೃತ ಸಾಹಿತ್ಯ ಮತ್ತು ಆಧ್ಯಾತ್ಮಿಕತೆಗೆ ಮಹರ್ಷಿ ವಾಲ್ಮೀಕಿ ನೀಡಿದ ಕೊಡುಗೆಯನ್ನು ನಾವು ಕೃತಜ್ಞತೆಯಿಂದ ಸ್ಮರಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿಯಂತಹ ಮಹಾತ್ಮರ ಬದುಕು-ಬರಹ, ಚಿಂತನೆ-ತತ್ವಗಳು ಮನುಕುಲಕ್ಕೆ ಆದರ್ಶವಾಗಿವೆ. ವಾಲ್ಮೀಕಿ ರಾಮಾಯಣದಲ್ಲಿನ ಶ್ರೀರಾಮನ ಕತೆ ಜೀವನಕ್ಕೆ ಶಕ್ತಿ ಮತ್ತು ಪ್ರೇರಣೆಯನ್ನು ನೀಡುತ್ತದೆ. ರಾಮಾಯಣ ಹಲವು ಮೌಲ್ಯ ಹಾಗೂ ಆದರ್ಶಗಳ ಸಂಗಮವಾಗಿದೆ. ಮಹರ್ಷಿ ವಾಲ್ಮೀಕಿಯವರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶಮಯ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ಉಪನ್ಯಾಸಕರಾದ ಎನ್.ಬಿ.ಹಸಬಿ, ಎಸ್.ಪಿ.ದೇಶಪಾಂಡೆ, ಎಚ್.ಜಿ.ಗೌಡರ ಹಾಗೂ ಎಫ್.ಡಿ.ಎ ರಾಜು ಚವ್ಹಾಣ ಇದ್ದರು. ಉಪನ್ಯಾಸಕ ಕೆ.ಜಿ.ಲಮಾಣಿ ವಂದಿಸಿದರು.