ಜಿಲ್ಲೆ

ಮಹಾ ಶರಣನಿಗೆ ಪುಷ್ಪ ಸಮರ್ಪಣೆ

Vijayapura

ವಿಜಯಪುರ: ಕಾಯಕಯೋಗಿ ಮಹಾಶರಣ ಸಿದ್ಧರಾಮೇಶ್ವರರ ಜಯಂತಿಯನ್ನು ಕರೊನಾ ಹಿನ್ನೆಲೆ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಯಂತಿ ಹಮ್ಮಿಕೊಳ್ಳಲಾಯಿತು. ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪ ಸಮರ್ಪಿಸಲಾಯಿತು.

ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಮಾತನಾಡಿ, ಸಿದ್ಧರಾಮೇಶ್ವರರು ಅನೇಕ ವಚನಗಳ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಚಳವಳಿ ನಡೆಸಿದರು. ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳೋಣ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈರಪ್ಪ ಆಶಾಪೂರ, ವಿದ್ಯಾವತಿ ಅಂಕಲಗಿ, ರಾಮು ಹೊಸಪೇಟೆ ಹಾಗೂ ಎಲ್ಲ ಸಮಾಜ ಬಾಂಧವರು, ಅಭಿಮಾನಿ ಬಳಗದವರು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.