ಜಿಲ್ಲೆ

ಮಹಾಗಣಪತಿ ದರ್ಶನ ಪಡೆದ ಚಂದ್ರಪ್ಪ

ಚಿತ್ರದುರ್ಗ: ವಿಶ್ವ ಹಿಂದು ಪರಿಷದ್‌ ಮತ್ತು ಬಜರಂಗದಳದಿಂದ ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದು ಮಹಾಗಣಪತಿ ಸನ್ನಿಧಾನಕ್ಕೆ ಗುರುವಾರ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಭೇಟಿ ನೀಡಿ ಸ್ವಾಮಿಯ ಆಶೀರ್ವಾದ ಪಡೆದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಮುಖಂಡರಾದ ಜಿ.ಎಸ್.ಮಂಜುನಾಥ್, ಬಾಲಕೃಷ್ಣ ಯಾದವ್, ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಬಿ.ಟಿ.ಜಗದೀಶ್, ಹಾಲಸ್ವಾಮಿ, ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‌ಕುಮಾರ್, ಎನ್.ಡಿ.ಕುಮಾರ್, ಪ್ರಕಾಶ್ ರಾಮಾನಾಯ್ಕ, ವೀರೇಂದ್ರ ಕೋಗುಂಡೆ ಇತರರಿದ್ದರು.