ಬಾಗಲಕೋಟೆ ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಬಿಜೆಪಿ ನಗರ ಮಂಡಲ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಹಾವೀರ ಜಯಂತಿ ಹಾಗೂ ಡಾ.ಬಾಬು ಜಗಜೀವನ್‌ರಾಂ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ವೀರಣ್ಣ ಚರಂತಿಮಠ. ವಿಧಾನ ಪರಿಷÀತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ,ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬಿಜೆಪಿ ಉಪಾಧ್ಯಕ್ಷ ರಾಜು ರೇವಣಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಇದ್ದರು. 
ಜಿಲ್ಲೆ

ಮಹಾತ್ಮರ ಶಾಂತಿ-ಹಸಿರು ಕ್ರಾಂತಿ ಅನುಕರಣೀಯ

ಬಾಗಲಕೋಟೆ: ಮಹಾವೀರರು ಶಾಂತಿ ಸಂಕೇತವಾದರೆ ಬಾಬು ಜಗಜೀವನ್ ರಾಮ ಹಸಿರು ಕ್ರಾಂತಿಯ ಹರಿಕಾರರಾಗಿದ್ದರು ಎಂದು ಡಾ.ವೀರಣ್ಣ ಚರಂತಿಮಠ ಹೇಳಿದರು.
ನಗರದ ಶಿವಾನಂದ ಜೀನ್ ನಲ್ಲಿರುವ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಬಿಜೆಪಿ ನಗರ ಮಂಡಲ ವತಿಯಿಂದ ಹಮ್ಮಿಕೊಂಡ ಮಹಾವೀರ ಜಯಂತಿ ಹಾಗೂ ಡಾ.ಬಾಬು ಜಗಜೀವನ್‌ರಾಂ ಅವರ ಜನ್ಮಸ್ಮರಣೆ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಹಿಂಸೇ ಪರಮೋ ಧರ್ಮ ಎಂದು ಪ್ರತಿಪಾದಿಸಿದ ಭಗವಾನ ಮಹಾವೀರರು ಜಗತ್ತಿಗೆ ಶಾಂತಿಯ ಸಂದೇಶ ಸಾರಿದವರು. ಬದುಕಿ,ಬದುಕಲು ಬಿಡು ಎಂಬ ಸಂದೇಶವನ್ನು ಸಾರಿದ ಜೈನ ಧರ್ಮದ ೨೪ನೇ ತೀರ್ಥಂಕರಾಗಿದ್ದ ಮಹಾವೀರರು. ಮಾಜಿ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್‌ರಾಂ ಅವರು ಕಾರ್ಮಿಕ, ರೈಲ್ವೆ ಹಾಗೂ ಕೃಷಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ದೇಶಕ್ಕೆ ಬರಗಾಲ ಎದುರಾಗಿದ್ದ ಸಂದರ್ಭ ಕೃಷಿ ಚಟುವಟಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷÀತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ,ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬಿಜೆಪಿ ಉಪಾಧ್ಯಕ್ಷ ರಾಜು ರೇವಣಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಜಿಲ್ಲಾ ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ನಗರ ಮಂಡಲ ಅಧ್ಯಕ್ಷ ಸದಾನಂದ ನಾರಾ, ಗುಂಡು ಶಿಂಧೆ, ವಿಲಾಸ ವಂದಕುದರಿ ಇದ್ದರು.