ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಅವರು ಮಹಾನ್​ ನಾಯಕರ ೋಟೋಗಳಿಗೆ ಅವಮಾನ ಮಾಡಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ರಿಪಬ್ಲಿಕನ್​ ಸೇವಾ ಸಂಟನೆ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಿದರು. ಶ್ರವಣ ಕುರಣೆ, ಮಲ್ಲೆಶ ಕಾಂಬಳೆ, ಶಂಕರ ದೇಸುರಕರ ಇದ್ದರು. 
ಜಿಲ್ಲೆ

ಮಹಾನ್​ ನಾಯಕರಿಗೆ ಅವಮಾನ, ಕ್ರಮಕ್ಕೆ ಆಗ್ರಹ

Belagavi

ಬೆಳಗಾವಿ: ಈಚೆಗೆ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಅವರು ಮಹಾನ್​ ನಾಯಕರ ೋಟೋಗಳಿಗೆ ಪೂಜೆ ಮಾಡದೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ರಿಪಬ್ಲಿಕನ್​ ಸೇವಾ ಸಂಟನೆ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಿಯಮದಂತೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಪಂನಲ್ಲಿ ಸ್ವಾತಂತ್ರೋತ್ಸವ ಆಚರಿಸಿಲ್ಲ. ರಾಷ್ಟ್ರಪಿತ ಮಹಾತ್ಮ ಗಾಂಧಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್​.ಅಂಬೇಡ್ಕರ್​, ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿ ಗಣ್ಯ ವ್ಯಕ್ತಿಗಳ ಭಾವಚಿತ್ರಕ್ಕೆ ಗೌರವ ಸೂಚಕ ಪೂಜೆ ಸಲ್ಲಿಸದೆ ಅವಮಾನ ಮಾಡಿದ್ದಾರೆ. ಆದ್ದರಿಂದ ಅಂಕಲಿ ಗ್ರಾಪಂ ಪಿಡಿಒ ವಿನೋದ ಅಸೂದೆ, ಗ್ರಾಮ ಲೆಕ್ಕಾಧಿಕಾರಿ ವಿ.ಎಸ್​.ಗವಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ರಿಪಬ್ಲಿಕನ್​ ಸೇನಾ ಸಂಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರವಣ ಕುರಣೆ, ಉತ್ತರ ಕರ್ನಾಟಕ ಗೌರವಾಧ್ಯ ಮಲ್ಲೆಶ ಕಾಂಬಳೆ, ಜಿಲ್ಲಾಧ್ಯ ಶಂಕರ ದೇಸುರಕರ, ಉಪಾಧ್ಯ ಸಂಜು ದೇವಮಾನೆ, ಸಂತೋಷ ದೊಡ್ಡಮನಿ, ಮುತ್ತುರಾಜ ಜಮಾದಾರ ಇತರರಿದ್ದರು.