ಪರಶುರಾಮ ಮಹಾರಾಜನವರ ಅವರಿಗೆ ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
ಜಿಲ್ಲೆ

ಮಹಾರಾಜನವರ್‌ಗೆ ಪ್ರತಿಷ್ಠಿತ ನರಸಿಂಹಯ್ಯ ಪ್ರಶಸ್ತಿ

ಸಂತೋಷ ದೇಶಪಾಂಡೆ

ಬಾಗಲಕೋಟೆ: ಸತ್ಯಶೋಧಕ ಸಂಘಟನೆ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಅವರಿಗೆ ಪ್ರತಿಷ್ಠಿತ ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕಳೆದ ೨೫ ವರ್ಷಗಳಿಂದ ಪ್ರಗತಿಪರ ಚಿಂತನೆ, ವೈಚಾರಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವ ಅವರು ತಮ್ಮ ವಿಶಿಷ್ಠಪೂರ್ಣ ಭಾಷಣಗಳ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಯಲಹಂಕ ಬಳಿಯ ಬಾಗಲೂರಿನ ವಿಜೆ ಅಂತಾರಾಷ್ಟ್ರೀಯ ಶಾಲಾ ಮೈದಾನದಲ್ಲಿ ರಾಜ್ಯ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.