ಜಿಲ್ಲೆ

ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ

ಹುಬ್ಬಳ್ಳಿ: ಕೋವಿಡ್-19 ಲಾಕ್​ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಸಾರಿಗೆ ಬಸ್ ಸಂಚಾರ ಮತ್ತೆ ಆರಂಭಿಸಲಾಗಿದೆ ಎಂದು ವಾಕರಸಾ ಸಂಸ್ಥೆ ತಿಳಿಸಿದೆ.

ಮೊದಲ ಹಂತದಲ್ಲಿ ವಿಜಯಪುರ ಹಾಗೂ ಚಿಕ್ಕೋಡಿ ಮಾರ್ಗವಾಗಿ ಮಹಾರಾಷ್ಟ್ರದ ಪ್ರಮುಖ ಸ್ಥಳಗಳಾದ ಸೊಲ್ಲಾಪುರ, ಬಾಶಿ, ಪಂಡರಾಪುರ, ಔರಂಗಾಬಾದ್, ಇಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ ಬಸ್​ಗಳು ಸಂಚರಿಸಲಿವೆ. ನಿಪ್ಪಾಣಿ- ಕೊಲ್ಲಾಪುರ ಮಾರ್ಗವಾಗಿ ಪುಣೆ, ಪಿಂಪ್ರಿ, ಮುಂಬೈ, ಬೊರಿವಿಲಿ, ಶಿರಡಿ ಮತ್ತಿತರ ಸ್ಥಳಗಳಿಗೆ ಶೀಘ್ರದಲ್ಲಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.