ಬಾಗಲಕೋಟೆ ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಸಿಕ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿದರು.  
ಜಿಲ್ಲೆ

ಮಹಾಲಿಂಗಪುರ ಪ್ರಕರಣ ಮರುಕಳಿಸದಿರಲಿ

ಬಾಗಲಕೋಟೆ: ಪ್ರಸವಪೂರ್ವ ಲಿಂಗ ಪತ್ತೆಗಾಗಿ ಮಹಿಳೆಯೊರ್ವಳು ಮರಣ ಹೊಂದಿರುವ ಪ್ರಕರಣ ಈಚೆಗೆ ಮಹಾಲಿಂಗಪುರದಲ್ಲಿ ಬೆಳಕಿಗೆ ಬಂದಿದ್ದು, ಇಂತಹ ಪ್ರಕರಣಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ಯಾವುದೇ ಕಾರಣಕ್ಕೂ ಮರಕಳಿಸದಿರುವಂತೆ ಕಾರ್ಯನಿರ್ವಹಿಸುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಽಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಹಳೇ ಸಭಾಂಗಣದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೇ ಮಾಹೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ೧೮೩ ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಇವುಗಳಿಗೆ ನಿಯಮಿತವಾಗಿ ಆಯಾ ತಾಲೂಕಿನ ಆರೋಗ್ಯಾಽಕಾರಿಗಳು ಭೇಟಿ ನೀಡಿ ಪರಿಶೀಲಿಸುವ ಕಾರ್ಯ ಮಾಡಿ, ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಂಡು ಒಂದು ವಾರದೊಳಗೆ ವರದಿ ನೀಡಬೇಕು, ನಕಲಿ ವೈದ್ಯರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸುವ ಕಾರ್ಯ ಮಾಡಬೇಕು ಎಂದರು.

ಸುರಕ್ಷಿತ ಹೆರಿಗೆಗಾಗಿ ಜಿಲ್ಲೆಯ ೪೧ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ೨೪*೭ ಕೇಂದ್ರಗಳನ್ನಾಗಿ ಮಾಡಲಾಗಿದ್ದು, ಇವುಗಳಲ್ಲಿ ವಿಶೇಷವಾಗಿ ಬಾದಾಮಿ ಮತ್ತು ಬೀಳಗಿ ತಾಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಒಂದೂ ಹೆರಿಗೆ ಆಗದೇ ಇರುವುದು ತಾಲೂಕು ಆರೋಗ್ಯ ಅಽಕಾರಿಯ ನಿಷ್ಕಾಳಜಿತನ ತೋರಿಸುತ್ತದೆ. ಸಕಾಲಕ್ಕೆ ಸಾರ್ವಜನಿಕರಿಗೆ ಸ್ಪಂದಿಸದೆ, ಅಽಕಾರಿಗಳು ನಿರ್ಲಕ್ಷ ಮತ್ತು ನಿಧಾನಗತಿಯಿಂದ ಕೆಲಸ ಮಾಡಿದಲ್ಲಿ ಅಂತಹ ಅಽಕಾರಿಗಳನ್ನು ಕಡ್ಡಾಯ ರಜೆಯ ಮೇಲೆ ಕಳಿಸಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಡೆಂಘ್ಯೆ ನಂತಹ ಕಿಟಜನ್ಯ ರೋಗಗಳು ಹೆಚ್ಚಳವಾಗದಂತೆ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ಜಿಲ್ಲಾ ಅಥವಾ ಗ್ರಾಮ ಮಟ್ಟದ ಯಾವುದೇ ಕಾರ್ಯಕ್ರಮವಾಗಿರಲಿ ಅದು ಜನರಿಗೆ ತಲುಪುವಂತಿರಬೇಕು. ಇದಕ್ಕಾಗಿ ಸೂಕ್ತ ಕ್ರಿಯಾ ಯೋಜನೆಗಳನ್ನು ರೂಪಿಸಿಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ರಾಜಕುಮಾರ ಯರಗಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಮರೇಶ ಹಾಗೂ ಶಿಶು ಅಭಿವೃದ್ಧಿ ಯೋಜನಾಽಕಾರಿಗಳು ತಾಲೂಕು ಆರೋಗ್ಯಾಽಕಾರಿಗಳು ಇದ್ದರು.