ಹುಕ್ಕೇರಿ: ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಅಧ್ಯಕ್ಷ ಮಹಾವೀರ ನಿಲಜಗಿ ಅವರಿಗೆ ಬೆಂಗಳೂರಿನ ದಿ ನ್ಯೂಸ್ ಪೇಪರ್ಸ್ ಆಫ್ ಅಸೋಸಿಯೇಷನ್ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸತ್ಕರಿಸಿದೆ. ಮಾಧ್ಯಮ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರದ ಸಾಧನೆಗಾಗಿ ಮಹಾವೀರ ನಿಲಜಗಿ ಅವರಿಗೆ ಪ್ರಶಸ್ತಿ ನೀಡಲಾಗಿದೆ.
ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಕರ್ನಾಟಕ ಮಾಧ್ಯಮ ಸಂಸ್ಥೆ ಈಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಪದ್ಮಶ್ರೀ ಜೋಗತಿ ಮಂಜಮ್ಮ, ಚಿತ್ರನಟಿ ಶುೃತಿ, ಸ್ವರ್ಣ ಗೋಲ್ಡ್ ಪ್ಯಾಲೇಸ್ ಮಾಲೀಕ ಟಿ.ಎ. ಸರವಣ್, ಮಂಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರನ್, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಕೃಷ್ಣ ಭಟ್, ಡಿ.ಜೆ. ಕಲ್ಪನಾ, ಹುಕ್ಕೇರಿಯ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಶೋಕ ಪಾಟೀಲ, ಕರ್ನಾಟಕ್ ಜೈನ ಅಸೋಸಿಯೇಷನ್ ಸಂಚಾಲಕ ರೋಹಿತ್ ಚೌಗಲಾ, ಸ್ಥವನಿಧಿ ಸುಕ್ಷೇತ್ರ ಸಂಚಾಲಕ ಬಾಹುಬಲಿ ಸೊಲ್ಲಾಪುರೆ, ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಕಾರ್ಯದರ್ಶಿ ಸಂಜಯ ನಿಲಜಗಿ, ಮಹಾವೀರ ಮಲ್ಟಿಪರ್ಪಸ್ ಸಹಕಾರಿ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಪಾಟೀಲ ಇತರರಿದ್ದರು.