ಜಿಲ್ಲೆ

ಮಹಿಳಾ ಕ್ರೀಡಾ ಸಂಕಿರ್ಣ ನಿರ್ಮಾಣ

ಕಲಬುರಗಿ: ಪ್ರತಿಭಾ ಪ್ರದರ್ಶನಕ್ಕೆ ಕ್ರೀಡಾಕೂಟಗಳು ಸಹಕಾರಿ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.
ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ೨೦೨೪-೨೫ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಸಿ.ಎಂ ಕಪ್ ಕ್ರೀಡಾಕೂಟ ಉದ್ಘಾಟನೆಯಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಜಿಲ್ಲೆಯ ಕ್ರೀಡಾಪಟುಗಳು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲೆಗೆ ಹೆಮ್ಮೆ ತರುವ ಕಾರ್ಯ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಚಂಪಾ ಕ್ರೀಡಾಂಗಣ ಮುಂಭಾಗದಲ್ಲಿ ಮಹಿಳಾ ಕ್ರೀಡಾ ಸಂಕಿರ್ಣ ಮಾಡಲಾಗುತ್ತಿದೆ. ಅಲ್ಲದೆ ಜಿಲ್ಲಾ ಕ್ರೀಡಾ ಸಂಕಿರ್ಣ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ೧೪ ಕೋಟಿ ರೂ. ಅನುದಾನ ಮಂಜೂರಾಗಿ ಕಾರ್ಯ ಪ್ರಗತಿಯಲ್ಲಿದೆ. ಈ ಭಾಗದಲ್ಲಿ ಕ್ರೀಡಾ ಮನೋಭಾವನೆ ಬೆಳೆಯಲು ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಬಲೂನ್ ಹಾರಿಬಿಡುವುದರ ಮೂಲಕ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಶಿಕ್ಷಣದ ಜತೆಗೆ ಕ್ರೀಡೆಗೂ ಪ್ರಾಧಾನ್ಯತೆ ನೀಡಬೇಕು. ಈ ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಕೊರತೆ ಎದ್ದು ಕಾಣುತ್ತಿದೆ. ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ನೀಡಬೇಕು. ಈ ಮೂಲಕ ಹೆಚ್ಚಿನ ಸಂಖ್ಯೆಯ ಮಕ್ಕಳು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ. ಕೆಕೆಆರ್‌ಡಿಬಿ ಪ್ರತಿವರ್ಷ ೩-೪ ಕೋಟಿ ರೂ. ಕ್ರೀಡೆಗೆ ಖರ್ಚು ಮಾಡಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಕೆ. ಮಾತನಾಡಿ, ಈ ಕ್ರೀಡಾಕೂಟದಲ್ಲಿ ೭ ಜಿಲ್ಲೆಗಳಿಂದ ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಸೋಮವಾರ ವಾಲಿಬಾಲ್, ಹ್ಯಾಂಡ್‌ಬಾಲ್, ಟೇಬಲ್‌ಟೆನ್ನಿಸ್, ಈಜು, ಲಾನ್‌ಟೆನ್ನಿಸ್ ಜೂಡೋ ಕ್ರೀಡೆಗಳು ನಡಿಯುತ್ತವೆ ಎಂದರು.
ರಾಜ್ಯಮಟ್ಟದ ಈಜು ಕ್ರೀಡಾಪಟು ಬಸವರಾಜ ಪಾಟೀಲ್ ಮತ್ತು ರಾಷ್ಟಿçÃಯ ಮಟ್ಟದ ಕ್ರೀಡಾ ಪಟು ಹ್ಯಾಪಿರಾಜ ಅವರು ಕ್ರೀಡಾಜ್ಯೋತಿ ಶಶೀಲ್ ನಮೋಶಿಯವರಿಗೆ ನೀಡಿದರು. ಬಸವರಾಜ ಪಾಟೀಲ್ ಪ್ರತಿಜ್ಞಾವಿಧಿ ಬೋಧಿಸಿದರು.
ಜಿಪಂ ಸಿಇಒ ಭಂವರ್‌ಸಿAಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹಾಕಿ ತರಬೇತಿದಾರ ಸಂಜಯ ಬಾಣದ್, ಬಾಸ್ಕೆಟ್‌ಬಾಲ್ ತರಬೇತಿದಾರರು ಪ್ರವೀಣ ಪುಣೆ, ಮುಜಮ್ಮಿಲ್ ಕೆಂಭಾವಿ ಇತರರಿದ್ದರು.