ಚಾಮರಾಜನಗರ: ಮೈಸೂರು-ಚಾಮರಾಜನಗರ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.
ತಾಲೂಕಿನ ಕೊತ್ತಲವಾಡಿ ಗ್ರಾಮದ ರಾಜು (19) ಮೃತ ದುರ್ದೈವಿ. ಈತ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ಕರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಶುಕ್ರವಾರ ರಾತ್ರಿಯ ವೇಳೆಯಲ್ಲಿ ಚಾಮರಾಜನಗರದತ್ತಾ ಬರುವಾಗ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಮತ್ತು ವಾಹನ ಸವಾರ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸಂಚಾರ ಠಾಣೆಯ ಪೊಲೀಸರು ಅಪಘಾತ ಸ್ಥಳಕ್ಕೆ ಆಗಮಿಸಿ ಮೃತ ದೇಹಗಳನ್ನು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆಗೆ ರವಾನಿಸುಇದ್ದರು. ಮೃತ ಮಹಿಳೆಯ ವಯಸ್ಸು ಅಂದಾಜು 75 ವರ್ಷವಾಗಿದ್ದು, ಆಕೆಯ ವಿಳಾಸ ತಿಳಿದು ಬಂದಿಲ್ಲ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.