ಜಿಲ್ಲೆ

ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಹತ್ಯೆ

reportermys

ಹಾಸನ : ಮದ್ಯ ಕುಡಿಸಿ 53 ವರ್ಷದ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ತಾಲ್ಲೂಕಿನ ರಾಮಕೃಷ್ಣಪುರದಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆ ಏ.10 ರಂದು ಹಾಸನದಲ್ಲಿರುವ ಸಂಬಂಧಿಕರ ಮೆನೆಗೆ ಹೋಗಲು ಜಾವಗಲ್ ಬಸ್ ನಿಲ್ದಾಣದ ಬಳಿ ನಿಂತಿದ್ದ ವೇಳೆ ಪರಿಚಯಸ್ಥರಾದ ಜಾವಗಲ್ ಗ್ರಾಮದ ಬಸವರಾಜು (40) ಮುರುಳಿ (37) ಎಂಬ ಆರೋಪಿಗಳು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗಿ ತೋಟವೊದಲ್ಲಿ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿ ಕೊಲೆಗೈದಿದ್ದಾರೆ ಎಂದು ತಿಳಿಸಿದರು.

ಮಹಿಳೆ ಸಂಬಂಧಿಕರ ಮನೆಗೆ ಹೋಗದ್ದಿದ್ದರಿಂದ ಗಾಬರಿಗೊಂಡ ಆಕೆಯ ಪುತ್ರ ಏ.12ರಂದು ನಾಪತ್ತೆಯಾಗಿರುವ ಬಗ್ಗೆ ಜಾವಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸುತ್ತಮುತ್ತಲ ಗ್ರಾಮಗಳಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ತೋಟದಲ್ಲಿ ಏ.12ರಂದು ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬರು ಮಹಿಳೆಯನ್ನು ಬಸವರಾಜು ಮತ್ತು ಮುರುಳಿ ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾದ ಸತ್ಯ ಬಾಯ್ಬಿಟ್ಟಿದ್ದಾರೆ.