ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಸಿಡಿಲು ಬಡಿದು ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಆರೋಗ್ಯವನ್ನು ಶಾಸಕ ಆರ್.ನರೇಂದ್ರ ವಿಚಾರಿಸಿದರು. 
ಜಿಲ್ಲೆ

ಮಹಿಳೆಗೆ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲು

ಹನೂರು: ತಾಲೂಕಿನ ಪೊನ್ನಾಚಿ ಸಮೀಪದ ರಾಮೇಗೌಡನ ದೊಡ್ಡಿಯಲ್ಲಿ ಭಾನುವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಸಿಡಿಲು ಬಡಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಜಡೇಮಾದಮ್ಮ ಎಂಬವರು ಬೆಳಗ್ಗೆ ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಕೈ, ಕಾಲು ಸ್ವಾಧೀನ ಕಳೆದುಕೊಂಡು ನಿತ್ರಾಣಗೊಂಡರು. ಬಳಿಕ ಕುಟುಂಬಸ್ಥರು ಸ್ಥಳೀಯವಾಗಿ ಪ್ರಥಮ ಚಿಕಿತ್ಸೆ ಕೊಡಿಸಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಶಾಸಕ ಆರ್.ನರೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದು ಆರೋಗ್ಯ ವಿಚಾರಿಸಿದರು. ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಜಡೇಮಾದಮ್ಮ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದರು.