ಬೇಲೂರು: ತಾಲೂಕಿನ ಅರೇಹಳ್ಳಿ ಗ್ರಾಮದ ಸರ್ಕಾರಿ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅರೇಹಳ್ಳಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ 2ದಿನಗಳ ಕಾಲ ಆಯೋಜಿಸಿದ್ದ ಮಹಿಳೆಯರ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ. ಶಿವಾನಂದ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮಹಿಳೆಯರ ಹಕ್ಕುಗಳ ರಕ್ಷಣೆ, ಮಹಿಳೆಯರ ಮೇಲಿನ ದೌರ್ಜನ್ಯ, ಮಹಿಳೆಯರ ಸಬಲೀಕರಣ ಹಾಗೂ ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದು, ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು, ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಉತ್ತಮವಾದ ವಾತಾವರಣ ಕಲ್ಪಿಸುವುದು ನಿಮ್ಮೆಲ್ಲರ ಸಹಕಾರದೊಂದಿಗೆ ನಮ್ಮ ಜವಾಬ್ದಾರಿಯಾಗಿರುತ್ತದೆ. ಆ ನಿಟ್ಟಿನಲ್ಲಿ ಕಲಿಕೆಗೆ ಹಾಗೂ ಕ್ರೀಡೆಗೆ ಸಂಬಂಧಿಸಿದ ಪರಿಕರಗಳನ್ನು ಪಂಚಾಯಿತಿ ವತಿಯಿಂದ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಿಗೆ ಈ ದಿನ ವಿತರಿಸುತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ರೀಡಾಕೂಟ ಮತ್ತು ವಿವಿದ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಗ್ರಾ.ಪ ಅಧ್ಯಕ್ಷೆ ಬಿ.ಪಾತಿಮಾ, ಉಪಾಧ್ಯಕ್ಷ ಮುನೀರಾ, ಲೆಕ್ಕ ಸಹಾಯಕ ಚಿಕ್ಕಯ್ಯ ಇತರರು ಇದ್ದರು.