ಚಿಕ್ಕಮಗಳೂರು ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಅವರ ಮೂಲಕ ಕೇಂದ್ರ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮದ್ದೂರಿನಲ್ಲಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು. ಜಸಂತಾ ಅನಿಲ್‌ಕುಮಾರ್, ಲಲಿತಾ ರವಿನಾಯ್ಕ, ಕವಿತಾ ಶೇಖರ್, ರೂಪ ಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ಮಹಿಳೆಯರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರನ್ನು ಅಮಾನತುಗೊಳಿಸಿ

ಚಿಕ್ಕಮಗಳೂರು: ಗಣಪತಿ ವಿಸರ್ಜನೆಯ ವೇಳೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಮಹಿಳೆಯರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮಂಗಳವಾರ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಅವರ ಮೂಲಕ ರಾಷ್ಟಿçÃಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್‌ಕುಮಾರ್, ಮಂಡ್ಯ ಜಿಲ್ಲೆಯ ಮದ್ದೂರಿನ ಗಣಪತಿ ವಿಸರ್ಜನೆಯಲ್ಲಿ ಪೊಲೀಸ್ ಸಿಬ್ಬಂದಿ ಮಹಿಳೆಯರ ಮೇಲೆ ಲಾಠಿ ಬೀಸಿರುವ ಕ್ರಮ ಸರಿಯಲ್ಲ. ಕೂಡಲೇ ಲಾಠಿ ಪ್ರಹಾರ ನಡೆಸಿದ ಪೊಲೀಸರನ್ನು ಅಮಾನತುಗೊಳಿಸಬೇಕು. ಜೊತೆಗೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರತ್ಯೇಕ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಮಹಿಳಾ ಆಯೋಗ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೇ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಅಲ್ಲದೇ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲದಿರುವುದು ರಾಜ್ಯದ ಹೀನಾಯ ಸ್ಥಿತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಗಣಪತಿ ವಿಸರ್ಜನೆಯಲ್ಲಿ ಗಲಭೆ ನಡೆದಿವೆ. ಆದರೆ ಆರೋಪಿಗಳನ್ನು ಬಂಧಿಸುವ ಬದಲು ಮೆರವಣಿಗೆಯಲ್ಲಿ ಸಾಗುತ್ತಿದ್ದ ಅಮಾನಕ ಮಹಿಳೆಯರನ್ನು ಪೊಲೀಸರು ಗುರಿಯಾಗಿರುವುದು ಸರಿಯಲ್ಲ. ಹೀಗಾಗಿ ರಾಷ್ಟಿçÃಯ ಮಹಿಳಾ ಆಯೋಗ ಮದ್ಯಪ್ರವೇಶಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಸದಸ್ಯರಾದ ಕವಿತಾ ಶೇಖರ್, ರೂಪ ಕುಮಾರ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಪ್ರೀತಿ ಯೋಗೀಶ್, ನಗರ ಕಾರ್ಯದರ್ಶಿ ಸೌಮ್ಯ, ಮಹಿಳಾ ಘಟಕದ ಪವಿತ್ರ ಮಧುಗುಂಡಿ ಉಪಸ್ಥಿತರಿದ್ದರು.