ಜಿಲ್ಲೆ

ಮಹಿಳೆಯರ ಸಾಧನೆಗೆ ಮುಕ್ತ ಅವಕಾಶ ಅವಶ್ಯ

ಬಾಗಲಕೋಟೆ:  ಪ್ರತಿ ಮಹಿಳೆಯು ಅಗಾಧವಾದ ಶಕ್ತಿ ಹೊಂದಿದ್ದು, ಮಹಿಳೆಯರಿಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಮುಕ್ತ ವಾತಾವರಣ ಸಿಗುವಂತಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಪೆÇೀಲಿಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹಮ್ಮಿಕೊಂಡ ಪ್ರತಿಜ್ಞಾ ವಿಧಿ, ಶಾಲಾ ಮಕ್ಕಳಿಂದ ಜಾಥಾ, ಸಹಿ ಕ್ಯಾಂಪೇನ್ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ತ್ರೀ ಯಾವುದೇ ಶೋಷಣೆಗೆ ಒಳಗಾದಾಗ ತನ್ನ ಸಾಮಥ್ರ್ಯ ಶಕ್ತಿಯನ್ನು ಬಳಸಿಕೊಂಡು ಮುಂದೆ ಬರಬೇಕು. ಆಧುನಿಕ ಸಮಾಜದಲ್ಲಿ ಸ್ತ್ರೀಯರಿಗೆ ಸ್ಥಾನಮಾನ ಹಾಗೂ ಸಾಧನೆಗೈಯಲು ಹೆಚ್ಚಿನ ಅವಕಾಶಗಳು ಸಿಗುತ್ತಿವೆ. ಅದೇ ರೀತಿ ಪೋಷಣೆ ಮತ್ತು ರಕ್ಷಣೆ ಸಹ ಸಿಗಬೇಕಾಗಿದೆ. ಹೆಣ್ಣು ಮಕ್ಕಳ ಪೋಷಣೆ, ರಕ್ಷಣೆ ಕುರಿತಂತೆ ಮನೆಯಲ್ಲಿ ಪೋಷಕರು ತಾರತಮ್ಯ ಮಾಡದೇ, ಗಂಡು ಮಕ್ಕಳಿಗೆ ಸಿಗುವ ಸ್ಥಾನಮಾನ ಹೆಣ್ಣು ಮಕ್ಕಳಿಗೆ ಸಿಗುವಂತಾಗಬೇಕು ಎಂದು ತಿಳಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಗಟ್ಟುವಲ್ಲಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಸಂವಿಧಾನದ ಆಶಯದಂತೆ, ಸಮಾನತೆಯನ್ನು ತರಬೇಕು ಹಾಗೂ ಪ್ರತಿ ವಿಧ್ಯಾರ್ಥಿಯಲ್ಲಿಯೂ ಅಗಾಧವಾದ ಶಕ್ತಿ ಇದ್ದು, ಇದಕ್ಕೆ ಸಾಕ್ಷಿ ಅನ್ನುವಂತೆ ನಮ್ಮ ಜಿಲ್ಲೆಯ ಕುಮಾರಿ ಅಕ್ಷತಾ ಕೊಣ್ಣುರು ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲೆಯ ಹಿರಿಮೆಯನ್ನು ಹೆಚ್ಚಿಸಿದ್ದಂತಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಮಾತನಾಡಿ, ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಮಾತಾ ಜೀಜಾಬಾಯಿ, ಕಲ್ಪನಾ ಚಾವ್ಲಾ, ಸುನೀತಾ ವಿಲಿಯಮ್ಸ ರವರ ಸಾಧನೆಯನ್ನು ನೆನೆದು, ಪ್ರತಿ ಹೆಣ್ಣು ಮಕ್ಕಳು ಅವರ ಹಾದಿಯಲ್ಲಿಯೇ ದೈರ್ಯದಿಂದ ಪ್ರತಿ ಕ್ಷೇತ್ರದಲ್ಲಿ ಸಾಧನೆ ಮಾಡಲು ಮಕ್ಕಳಿಗೆ ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ವೀಣಾ ಎಂ. ಬಾಲ್ಯವಿವಾಹ ನಿಷೇದ ಕಾಯ್ದೆ, ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರುದ್ರೇಶ ಪಿ.ಸಿ.ಪಿ.ಎಸ್.ಡಿ.ಟಿ. ಕಾಯ್ದೆ ಕುರಿತು, ಜಿಲ್ಲಾ ಮಿಷನ್ ಶಕ್ತಿ ಸಂಯೋಜಕ ಸುರೇಶ ಹುಲಮನಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಹಾಗೂ ಆಡಳಿತಾಧಿಕಾರಿ ಶಂಕ್ರಮ್ಮ ಸಖಿ ಒನ್ ಸ್ಟಾಫ್ ಸೆಂಟರನ ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಸಮಿತಿಯ ಅಧ್ಯಕ್ಷ ಎಚ್.ಎಸ್.ಪಾಟೀಲಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ ಕೆ, ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಜಿಲ್ಲಾಡಳಿತ ಭವನದಿಂದ ಡಾ.ಅಂಬೇಡ್ಕರ ಭವನದವರೆಗೆ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಜರುಗಿತು.