ಜಿಲ್ಲೆ

ಮಹಿಳೆಯರಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಚಾಮರಾಜನಗರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಮಹಿಳೆಯರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ (ಇಡಿಪಿ) ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳ ಮೂರನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಮಹಿಳೆಯರು 21 ವರ್ಷದೊಳಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 323) ಪಡೆದು ಅ.13ರೊಳಗೆ ಸಲ್ಲಿಸಬೇಕು ಅಥವಾ ಕರೆ ಮೂಲಕ ಹೆಸರು ನೋಂದಾಯಿಸಬಹುದು ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.