ಜಿಲ್ಲೆ

ಮಹಿಳೆಯರಿಗೆ ಮತದಾನದ ಹಕ್ಕನ್ನು ಕೊಟ್ಟಿದ್ದು ಕಾಂಗ್ರೆಸ್

ಚಿತ್ರದುರ್ಗ: ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಮುನ್ನುಡಿ ಬರೆದಿದೆ ಎಂದು ಜಿ ಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಜಿಲ್ಲಾಡಳಿತ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು,ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಮತದಾನ ಹಕ್ಕನ್ನು ಕೊಟ್ಟಿದ್ದು ಕಾಂಗ್ರೆಸ್ ಎಂ ಬುದನ್ನು ನೆನಪಿಸುವುದಾಗಿ ಹೇಳಿದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಕಟಿಸಿದ್ದ ಗ್ಯಾರಂಟಿಗಳ ಪೈಕಿ ನಾಲ್ಕನ್ನು ಅನುಷ್ಠಾನಗೊಳಿಸಲಾಗಿದೆ. ಶಕ್ತಿ ಯೋಜನೆಗೆ ಉತ್ತ ಮ ಸ್ಪಂದನೆ ದೊರೆತಿದೆ. ಇದರಿಂದ ನಷ್ಟದಲ್ಲಿದ್ದ ರಾಜ್ಯರಸ್ತೆ ಸಾರಿಗೆ ಸಂಸ್ಥೆ ಲಾಭದತ್ತ ಮುಖ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ.ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ.
ಈ ಯೋಜನೆಗೆ ನೋಂದಾಯಿಸಲು ಕಾಲಮಿತಿ ಇಲ್ಲ. ರಾಜ್ಯದ ಶೇ.87 ಮಹಿಳೆಯರಿಗೆ ಇದರ ಪ್ರಯೋಜನ ದೊರೆಯಲಿದೆ. ಬಿಜೆ ಪಿ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ಕುಂಟಿತಗೊಂಡಿತ್ತು,ಭ್ರಷ್ಟಾಚಾರ ವ್ಯಾಪಕವಾಗಿತ್ತು. ಜಿಲ್ಲೆ ಜನರ ಪ್ರಮುಖ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಸರ್ಕಾರಿ ಮೆಡಿಕಲ್ ಕಾಲೇಜು ಆರಂಭವಾಗುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಮಾತನಾಡಿ,ಸ್ವಾತಂತ್ರೃನಂತರದಲ್ಲಿ ಮಹಿಳಾ ಸಬಲೀಕರಣಕ್ಕೆ ಅನೇಕ ಕಾರ‌್ಯ ಕ್ರಮಗಳು ಜಾರಿಯಾಗಿವೆ. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ಈ ನಿಟ್ಟಿನಲ್ಲಿ ಇನ್ನೂ ದೃಢ ಹೆಜ್ಜೆ ಗಳನ್ನಿಟ್ಟಿದೆ ಎಂದರು.
ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಮಾತನಾಡಿ,ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 3.54 ಲಕ್ಷ ಮಹಿಳೆಯರು ನೋಂ ದಾಯಿಸಿದ್ದು,ರಾಜ್ಯದಲ್ಲೇ ನಮ್ಮ ಜಿಲ್ಲೆ 2ನೇ ಸ್ಥಾನದಲ್ಲಿದೆ.ಅನ್ಯರನ್ನು ಅವಲಂಬಿಸದೆ ತಮಗೆ ಸಂಬಂಧಿಸಿದ ವಿಚಾರಗಳಲ್ಲಿ ಮಹಿಳೆಯರು ಖುದ್ದು ನಿರ್ಧಾರಗಳನ್ನು ಕೈಗೊಳ್ಳಬೇಕು. ಸರ್ಕಾರದ ಹಲವು ಯೋ ಜನೆಗಳು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಪೂರಕವಾಗಿವೆ ಎಂ ದರು.
ಜಿಪಂ ಸಿಇಒ ಎಸ್.ಜೆ.ಸೋಮಶೇಖರ ಮಾತನಾಡಿ,ಸರ್ಕಾರ ನಾಲ್ಕು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಮೈ ಸೂರಿನಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ರಾಜ್ಯಮಟ್ಟದ ಉದ್ಘಾಟನಾ ಸಮಾರಂಭದ ನೇರ ಪ್ರಸಾರವನ್ನು ಜಿಲ್ಲೆ ಎಲ್ಲ 189 ಗ್ರಾಪಂಗಳು ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು ಎಂದರು.
ಗೃಹಲಕ್ಷ್ಮಿ ಯೋಜನೆ ಚಾಲನೆಗೊಂಡ ಮೊದಲ ದಿನ ಜಿಲ್ಲೆಯ 1,20,403 ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ.ಜಮಾ ಆಗಿದೆ,ಉಳಿದ ಎಲ್ಲ ಅರ್ಹ ಫಲಾನುಭವಿಗಳಿಗೂ ಹಂತ ಹಂತವಾಗಿ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅ ಭಿವೃದ್ಧಿ ಇಲಾಖೆ ಉಪನಿರ್ದೆಶಕಿ ಭಾರತಿ ಆರ್.ಬಣಕಾರ್ ತಿಳಿಸಿದರು.
ಫಲಾನುಭವಿಗಳಾದ ಸುಧಾ,ಪಾಲಮ್ಮ,ಮಂಜುಳಾ ಹಾಗೂ ನಸ್ರಿನ್‌ತಾಜ್ ಅವರಿಗೆ ಗಣ್ಯರು ಸಾಂಕೇತಿಕವಾಗಿ ಮಂಜೂರಾತಿ ಪತ್ರ ವಿತರಿಸಿದರು. ರಂಗಮಂದಿರದ ಗೃಹಲಕ್ಷ್ಮೀ ಫಲಾನುಭವಿಗಳಿಂದ ಭರ್ತಿಯಾಗಿತ್ತು. ಮೈಸೂರಿನ ಕಾರ‌್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡ ಲಾಗಿತ್ತು.
ಎಸ್‌ಪಿ ಧರ್ಮೇಂದ್ರಕುಮಾರ್ ಮೀನಾ,ಎಸಿ ಎಂ.ಕಾರ್ತಿಕ್, ತಹಸೀಲ್ದಾರ್ ಡಾ.ನಾಗವೇಣಿ,ಮೀನಾಕ್ಷಿ,ತಾರಕೇಶ್ವರಿ,ಅನುರಾಧ,ಪೂಜಾ,ಭಾಸ್ಕರ್,ಸೈಯದ್‌ನಸ್ರುಲ್ಲ, ಸುಮಿತ್ರಾ ಮತ್ತಿತರ ನಗರಸಭಾ ಸದಸ್ಯರು,ಆಯುಕ್ತ ಶ್ರೀನಿವಾಸ್ ಮತ್ತಿತರ ಅಧಿಕಾರಿಗಳಿದ್ದರು.