ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಮಾ.17ರಂದು ವಿದ್ಯುತ್ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
17ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೇಗೂರು ಉಪವಿಭಾಗ ಹಾಗೂ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ಗುಂಡ್ಲುಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ಗ್ರಾಹಕರು ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿಸಿದ ಕುಂದು ಕೊರತೆಗಳನ್ನು ಸಲ್ಲಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.