ಜಿಲ್ಲೆ

ಮಾ.19ರಂದು ಕಾಂಗ್ರೆಸ್‌ನಿಂದ ಸಾಮಾಜಿಕ ನ್ಯಾಯ ಸಮಾರಂಭ

reportermys

ಹಾಸನ : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾ.19ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಸಾಮಾಜಿಕ ನ್ಯಾಯ ಘಟಕದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ದೇವರಾಜೇಗೌಡ ತಿಳಿಸಿದರು.

ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ವಿಭಾಗದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್ ವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೊಸಂಗಿ, ಹಂದಿ ಜೋಗಿ, ದರ್ವೇಸಿ ಜಾತಿಗಳು ಸೇರಿದಂತೆ ಸುಮಾರು ಹಿಂದುಳಿದ ಸುಮಾರು 30 ಸಮುದಾಯಗಳನ್ನು ಸರ್ಕಾರ ಕಡೆಗಣಿಸಿವೆ. ಈ ಸಮುದಾಯದ ಜನರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಮತದಾನದ ಕಾರ್ಡ್, ಜಾತಿ ಪ್ರಮಾಣಪತ್ರ ಸೇರಿದಂತೆ ಯಾವುದೇ ದಾಖಲೆಗಳಿಲ್ಲದೆ ಸಂಕಷ್ಟದಿಂದ ಬದುಕುತ್ತಿದ್ದಾರೆ. ಈ ಎಲ್ಲಾ ಸಮುದಾಯಗಳ ಬೇಡಿಕೆಗಳ ಈಡೇರಿಕೆಗೆ ಸಂಘಟನಾತ್ಮಕ ಹೋರಾಟದ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಅಧ್ಯಕ್ಷ ಮಂಜೇಗೌಡ, ಉಪಾಧ್ಯಕ್ಷ ಸದಾಶಿವ, ರಾಜ್ಯ ಸಂಘಟನಾ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಹೊನ್ನೇಗೌಡ ಇತರರು ಉಪಸ್ಥಿತರಿದ್ದರು.