ಹಾಸನ : ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ಹುಟ್ಟೂರು ಚನ್ನರಾಯಪಟ್ಟಣ ತಾಲ್ಲೂಕಿನ ಸಂತೆಶಿವರ ಗ್ರಾಮದಲ್ಲಿ ಸ್ಥಾಪಿಸಲಾಗಿರುವ ‘ಎಸ್.ಎಲ್.ಭೈರಪ್ಪ ಕಲೆ ಮತ್ತು ಸಂಸ್ಕೃತಿ ಅಭಿವೃದ್ಧಿ ಕೇಂದ್ರ’ದ ಶಂಕುಸ್ಥಾಪನೆ ಸಮಾರಂಭ ಮಾ.26ರಂದು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ.ಸುದರ್ಶನ್ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಉಪಸ್ಥಿತಿಯಲ್ಲಿ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ನೆರವೇರಿಸಲಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಲ್.ಭೈರಪ್ಪ ಅವರು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಹೆಚ್.ಕೆ ಕುಮಾರಸ್ವಾಮಿ ಇತರರು ಭಾಗವಹಿಸಲಿದ್ದಾರೆ. ಶಾಸಕ ಸಿ.ಎನ್.ಬಾಲಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.