ಜಿಲ್ಲೆ

ಮಾ.31 ಕ.ರಾ ಮು ವಿ ವಿ ಪ್ರವೇಶಾತಿಗೆ ಕಡೆಯ ದಿನ

ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕೊಳ್ಳೆಗಾಲ ಪ್ರಾದೇಶಿಕ ಕೇಂದ್ರದಲ್ಲಿ 2024-25 ನೇ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ನಡೆಯುತ್ತಿದ್ದು ಪದವಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಸರ್ಟಿಫಿಕೆಟ್ ಕೋರ್ಸ್‌ಗಳ ಪ್ರವೇಶಾತಿಗೆ ಮಾ.31 ಕೊನೆಯ ದಿನಾಂಕವಾಗಿದೆ.

ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೊಳ್ಳೇಗಾಲ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಎನ್.ಧನಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.