ಹಾಸನ: ಕೆಲಸ ಮುಗಿಸಿಕೊಂಡು ಸಂಜೆ ಸುಮಾರು 6:45ರ ಸಮಯದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 39 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ
ವಿಜಯನಗರ ಬಡಾವಣೆಯಲ್ಲಿ ವಾಸವಾಗಿರುವ ಜ್ಯೋತಿ ಅವರು ಬೂನಹಳ್ಳಿ ಕೂಡಿನಲ್ಲಿರುವ ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮಂಗಳವಾರ ಎಂದಿನಂತೆ ಕೆಲಸಕ್ಕೆ ಹೋಗಿ ಸಂಜೆ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದರು. ವಿಜಯನಗರ ದರ್ಗದಿಂದ ಸ್ವಲ್ಪ ಮುಂದೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಮಹಿಳೆಯ ಕೊರಳಿಗೆ ಕೈ ಹಾಕಿ 2 ಲಕ್ಷ ರೂ. ಮೌಲ್ಯದ 39 ಗ್ರಾಂ ಚಿನ್ನದ ಮಾಂಗಲ್ಯದ ಸರವನ್ನು ಕಿತ್ತುಕೊಂಡು ಮೋಟಾರು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಹಾಸನ ಟೌನ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಬುಧವಾರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.