ಚಿಕ್ಕಮಗಳೂರು: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಅವರ ಆಡಳಿತ ಎಲ್ಲರಿಗೂ ಮಾರ್ಗದರ್ಶಕ ಎಂದು ಕೆಪಿಸಿಸಿ ಸದಸ್ಯ ಎ.ಎನ್.ಮಹೇಶ್ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಇಂದಿರಾ ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಬಿಜೆಪಿ ನಾಯಕರು ಜನರನ್ನು ಮರುಳು ಮಾಡುವ ಮತ್ತು ಸುಳ್ಳು ಹೇಳುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. </p><p>ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಕೆ.ಮಹಮದ್ ಮಾತನಾಡಿ, ಇಂದಿರಾ ಗಾಂಧಿ ಬಡವರ ಪರ ಕೆಲಸ ಮಾಡಿದ್ದರಿಂದ ಅನೇಕರು ನೆಮ್ಮದಿಯಿಂದ ಬದುಕುವಂತಾಗಿದೆ ಎಂದರು.
ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಉಪಾಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಮಾತನಾಡಿ, ಬಿಜೆಪಿ ಸರ್ಕಾರ ಜನರ ಮಧ್ಯೆ ವಿಷ ಬೀಜ ಬಿತ್ತುತ್ತಿದೆ. ಕಾಂಗ್ರೆಸ್ ಎಲ್ಲ ಸಮುದಾಯಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದೆ. ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯುವಕರು ನಿರುದ್ಯೋಗಿಗಳಾಗಿದ್ದಾರೆ ಎಂದು ಹೇಳಿದರು.