ಜಿಲ್ಲೆ

ಮಾಜಿ ಸಚಿವ ಜಬ್ಬಾರಖಾನ್ ಹೊನ್ನಳ್ಳಿ ನಿಧನ

Dharwad

ಹುಬ್ಬಳ್ಳಿ: ಮಾಜಿ ಸಚಿವ, ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷ ಜಬ್ಬಾರಖಾನ ಹೊನ್ನಳ್ಳಿ (75) ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು.

ಕೇಶ್ವಾಪುರ ನಿವಾಸಿಯಾದ ಹೊನ್ನಳ್ಳಿಯವರು ರಾಜಕೀಯಕ್ಕೆ ಬರುವ ಮುಂಚೆ ಶಿಕ್ಷಕರಾಗಿದ್ದರು. ಜನತಾ ದಳದಲ್ಲಿ ಗುರುತಿಸಿಕೊಂಡಿದ್ದ ಅವರು ಎಸ್.ಆರ್. ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು.

1999, 2007ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಧರ್ಮಸಿಂಗ್ ಹಾಗೂ ಎಸ್.ಎಂ. ಕೃಷ್ಣ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. 1996ರಿಂದ 3 ಅವಧಿಗೆ ಅಂಜುಮನ್ ಸಂಸ್ಥೆಯ ಅಧ್ಯಕ್ಷರಾಗಿದ್ದರು.

2018ರಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಇಲ್ಲಿನ ಗೋಕುಲ ರಸ್ತೆಯ ಕೆಎಲ್​ಇ ಸುಚಿರಾಯು ಆಸ್ಪತ್ರೆಯಲ್ಲಿ ವಿಧಿವಶರಾದರು.