ಜಿಲ್ಲೆ

ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ (81) ಸೋಮವಾರ ನಿಧನ ಹೊಂದಿದರು.

ಕೆಲ ದಿನಗಳಿಂದ ಅವರು ವಯೋ ಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಶಿಕ್ಷಕರಾಗಿ, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಅವರು ಶಿಕ್ಷಕರ ದಿನದಂದೇ ನಿಧನರಾಗಿದ್ದು ಕಾಕತಾಳೀಯ.

ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಗ್ರಂಥಾಲಯ ವಯಸ್ಕರ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಕಾರವಾರ ಜೊಯಿಡಾ ಕ್ಷೇತ್ರದಿಂದ ಮೂರು ಬಾರಿ ಎಂಎಲ್ ಎ ಆಗಿದ್ದರು. ಕಾರವಾರ ಹಾಗೂ ಜೊಯಿಡಾದ ಗ್ರಾಮೀಣ ಭಾಗದಲ್ಲಿ 23 ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು.

ಸಿದ್ದರ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಆಗಮಿಸಿ, ಅದೇ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸಂಸ್ಥಾಪಕ ಅಧ್ಯಕ್ಷರಾಗಿದ್ದರು.

ಕಾಂಗ್ರೆಸ್, ಜೆಡಿಎಸ್, ಬಿಜೆಪಿಯಲ್ಲಿ ಕಾರ್ಯ ನಿರ್ವಹಿಸಿದ್ದರು.