ಚಿಕ್ಕಮಗಳೂರು ತಾಲೂಕು ಪಂಚಾಯತಿ ಆವರಣದಲ್ಲಿರುವ ಮಾಜಿ ಸೈನಿಕರ ಸಂಘಕ್ಕೆ ಭೇಟಿ ನೀಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ವಿ.ಹನುಮಂತಪ್ಪ ಮಾಜಿ ಸೈನಿಕರ ಸಮಸ್ಯೆ ಆಲಿಸಿದರು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. 
ಜಿಲ್ಲೆ

ಮಾಜಿ ಸೈನಿಕರ ಸಮಸ್ಯೆ ಆಲಿಸಿದ ನ್ಯಾಯಾಧೀಶರು

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಕರ್ತವ್ಯದಲ್ಲಿರುವ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಅನುಕೂಲ ಒದಗಿಸಿಕೊಡುವ ಉz್ದೆÃಶದಿಂದ ಕಾನೂನು ಸಲಹಾ ಸಮಿತಿ ಇಡೀ ದೇಶದಾದ್ಯಂತ ಅಸ್ಥಿತ್ವಕ್ಕೆ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ವಿ.ಹನುಮಂತಪ್ಪ ಅವರು ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಮಾಜಿ ಸೈನಿಕರ ಸಂಘದ ಕಚೇರಿಗೆ ಬುಧವಾರ ಆಗಮಿಸಿ ಮಾಜಿ ಸೈನಿಕರ ಕುಂದುಕೊರತೆ ಆಲಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಸೈನಿಕರು ಹಾಗೂ ಮಾಜಿ ಸೈನಿಕರ ಸಮಸ್ಯೆಗಳನ್ನು ಆಲಿಸಲು ಕಾನೂನು ಸಲಹಾ ಸಮಿತಿ ಕಚೇರಿ ಆರಂಭಗೊಳಿಸಲಾಗುತ್ತದೆ. ಜೊತೆಗೆ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಯಾವುದೇ ಸಮಸ್ಯೆಗಳಿದ್ದಾಗ ಕಾನೂನು ನೆರವು ಒದಗಿಸುವ ಉz್ದÉÃಶದಿಂದ ವಕೀಲರ ಸೇವೆಯನ್ನೂ ಒದಗಿಸಲಾಗುವುದು. ಜೊತೆಗೆ ಸ್ಥಳೀಯವಾಗಿ ಸೈನಿಕರು ಹಾಗೂ ಮಾಜಿ ಸೈನಿಕರ ಸಮಸ್ಯೆ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕಾನೂನು ಸಲಹಾ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ವಿ.ಹನುಮಂತಪ್ಪ ಮಾಜಿ ಸೈನಿಕರಿಗೆ ಮಾಹಿತಿ ನೀಡಿದರು.

ನ್ಯಾಯಾಧೀಶರ ಎದುರು ತಮ್ಮ ಸಮಸ್ಯೆ ಹೇಳಿಕೊಂಡ ಮಾಜಿ ಸೈನಿಕರು, ನ್ಯಾಯಾಧೀಶರೇ ತಮ್ಮ ಬಳಿ ಬಂದು ಸಮಸ್ಯೆ ಆಲಿಸುತ್ತಿರುವುದು ಖುಷಿ ತಂದಿದೆ. ಆದರೆ ಜಿಲ್ಲೆಯಲ್ಲಿ ಮಾಜಿ ಸೈನಿಕರಿಗಾಗಿ ಮೀಸಲಿಟ್ಟ ಜಾಗಗಳು ಬೇರೆಯವರ ಅನುಭವದಲ್ಲಿವೆ. ಹೀಗಾಗಿ ಮಾಜಿ ಸೈನಿಕರಿಗೆ ಮೀಸಲಿಟ್ಟ ಜಾಗವನ್ನು ಮಾಜಿ ಸೈನಿಕರಿಗೆ ನೀಡಬೇಕು ಎಂದು ಮನವಿ ಮಾಡಿದರು.

ಇದಲ್ಲದೆ ಚಿಕ್ಕಮಗಳೂರು ನಗರಕ್ಕೆ ಹೊಂದಿಕೊAಡAತೆ ಇರುವ ನಲ್ಲೂರು ಗೇಟ್ ಬಳಿ ಮಾಜಿ ಸೈನಿಕರಿಗೆ ನಿವೇಶನಕ್ಕೆಂದು ಜಿಲ್ಲಾಧಿಕಾರಿಗಳು ಜಾಗ ಮೀಸಲಿರಿಸಿದ್ದರು. ಆದರೆ ಆ ಜಾಗವನ್ನು ಬೇರೆಯವರು ಒತ್ತುವರಿ ಮಾಡಿಕೊಂಡು ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದಲ್ಲದೆ ಸಖರಯಪಟ್ಟಣ ಹಾಗೂ ಸಾರಗೋಡು ಭಾಗದಲ್ಲಿ ಮಾಜಿ ಸೈನಿಕರಿಗೆ ಮೀಸಲಿಟ್ಟ ಜಾಗದಲ್ಲಿ ಬಲಾಡ್ಯರು ಒತ್ತುವರಿ ಮಾಡಿದ್ದಾರೆ ಎಂದು ನ್ಯಾಯಾಧೀಶರಿಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಈ ಬಗ್ಗೆ ಅಗತ್ಯ ದಾಖಲೆ ನೀಡಿದರೆ ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸುವ ಭರವಸೆ ನೀಡಿದರು. ಇದಲ್ಲದೆ ಮಾಜಿ ಸೈನಿಕರಿಗೆ ಅನುಕೂಲ ಒದಗಿಸಿಕೊಡುವ ನಿಟ್ಟಿನಲ್ಲಿ ವಕೀಲರ ಸೇವೆಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು.

ಈ ಬಗ್ಗೆ ವಿಜಯವಾಣಿಯೊಂದಿಗೆ ಮಾತನಾಡಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಂಜುನಾಥ್, ನ್ಯಾಯಾಧೀಶರು ಮಾಜಿ ಸೈನಿಕರಿಗೆ ಯಾವುದೇ ಸಮಸ್ಯೆ ಆದಲ್ಲಿ ತಮ್ಮನ್ನು ಸಂಪರ್ಕಿಸುವAತೆ ತಿಳಿಸಿದ್ದಾರೆ. ಹೀಗಾಗಿ ನಾವು ಮಾಜಿ ಸೈನಿಕರ ಸಂಘಕ್ಕಾಗಲಿ ಅಥವಾ ಯಾವುದೇ ಒಬ್ಬ ಮಾಜಿ ಸೈನಿಕ ಅಥವಾ ಕರ್ತವ್ಯ ನಿರತ ಸೈನಿಕರಿಗೆ ಸಮಸ್ಯೆ ಆದಲ್ಲಿ ಸಂಘದ ಮೂಲಕವೇ ಅಧಿಕೃತ ಮನವಿಯೊಂದಿಗೆ ಮುಂದಿನ ದಿನಗಳಲ್ಲಿ ನ್ಯಾಯಾಧೀಶರನ್ನು ಭೇಟಿ ಮಾಡಲಿz್ದÉÃವೆ. ನ್ಯಾಯಾಧೀಶರು ಮಾಜಿ ಸೈನಿಕರಿಗೆ ಎಲ್ಲ ನೆರವು ನೀಡುವ ಭರವಸೆ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಮಾಜಿ ಸೈನಿಕರ ಆತ್ಮಸ್ಥೆÊರ್ಯ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.