ಕಡಬಿ: ಸಮೀಪದ ಮಾಡಮಗೇರಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರ ಸಿದ್ಧಾರೂಢರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ದೇವರಿಗೆ ಅಭಿಷೇಕ ಮಾಡಲಾಯಿತು. ಗ್ರಾಮದ ಮುತೆದೆಯರು ನೈವೇದ್ಯ ಅರ್ಪಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಸಿದ್ಧಾರೂಢರ ಭಾವಚಿತ್ರದೊಂದಿಗೆ ಮೆರವಣಿಗೆ ಜರುಗಿತು. ನಂತರ ಮಹಾಪ್ರಸಾದ ನೆರವೇರಿತು.