ಜಿಲ್ಲೆ

ಮಾತಿಗೆ ಬದ್ಧವಾಗಿ ನಡೆದುಕೊಂಡಿದ್ದಾರೆ

ಹುಬ್ಬಳ್ಳಿ: ಆಪರೇಷನ್ ಸಿಂಧೂರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರರು ಎಲ್ಲೇ ಇದ್ದರೂ ಹುಡುಕಿ ಹೊಡೆಯುತ್ತೇವೆ ಎಂಬ ಮಾತಿಗೆ ಬದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಮಹಾನಗರ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮುಖಂಡ ಕಲಂದರ ಮುಲ್ಲಾ (ಹಟೇಲಸಾಬ) ಹೇಳಿದ್ದಾರೆ.

ಉಗ್ರರು ನಡೆಸಿದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಆಪರೇಷನ್ ಸಿಂಧೂರ ಮೂಲಕ ಭಾರತೀಯ ಸೇನಾಪಡೆ ತಕ್ಕ ಉತ್ತರ ನೀಡಿದೆ. ದೇಶದ ಹೆಮ್ಮೆಯ ಮೂರು ಸೇನೆಗಳು ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಉಗ್ರರನ್ನು ಸದೆಬಡಿದಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ದೇಶ ಹಾಗೂ ಸೈನಿಕರ ಪರವಾಗಿ ನಿಲ್ಲಬೇಕಿದೆ ಎಂದು ಹೇಳಿದ್ದಾರೆ.