ಬಾಗಲಕೋಟೆ: ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕಾದರೆ ಯುವ ಸಮುದಾಯವು ಮಾದಕ ದ್ರವ್ಯ ವ್ಯಸನದಿಂದ ಮುಕ್ತರಾಗಬೇಕು ಅಂದಾಗ ಆರೋಗ್ಯಕರ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯರಾದ ಡಾ ಅರುಣಕುಮಾರ ಗಾಳಿ ಅವರು ಹೇಳಿದರು.
ಅವರು ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಅಂತರಾಷ್ಟ್ರೀಯ ಮಾದಕ ವಸ್ತು ಮುಕ್ತ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಪ್ರತಿಜ್ಞಾ ಬೋಧನೆ ಮಾತನಾಡಿದರು.
ಮಾನವನ ಆರೋಗ್ಯಕ್ಕೆ ಮಾರಕವಾಗಿರುವಂತಹ ಗಾಂಜಾ, ಅಫೀಮ್ ದಂತಹ ಮಾದಕ ದ್ರವ್ಯಗಳಿಂದ ದೂರವಿರಬೇಕು, ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಮಾದಕ ದ್ರವ್ಯ ಸೇವಿಸದಂತೆ ಶ್ರಮ ವಹಿಸಬೇಕು ಅಂದಾಗ ಮಾದಕ ದ್ರವ್ಯ ವ್ಯಸನದ ಮುಕ್ತವಾದ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಿದೆ. ಜೂನ್ 26 ಅಂತರ ರಾಷ್ಟ್ರೀಯ ಮಾದಕ ವಸ್ತು ಮುಕ್ತ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನವನಗರ ಪೊಲೀಸ್ ಠಾಣೆಯ ಸಿಬ್ಬಂದಿಯವರು ಮತ್ತು ಕಾಲೇಜಿನ ಬೋಧಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.