ಜಿಲ್ಲೆ

ಮಾದಕ ವಸ್ತು ಸೇವನೆಯಿಂದ ವ್ಯತಿರಿಕ್ತ ಪರಿಣಾಮ

ಬೀದರ್: ಮಾದಕ ವಸ್ತುಗಳ ಬಳಕೆ ಮನುಷ್ಯನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಜತೆಗೆ ನೆರೆಹೊರೆಯ ವಾತಾವರಣವನ್ನೂ ಕಲುಷಿತಗೊಳಿಸುತ್ತದೆ ಎಂದು ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗುರುನಾನಕ್ ಪ್ರಥಮ ದರ್ಜೆ ಕಾಲೇಜು ಸಹಯೋಗದಡಿ ನಗರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾತ್ಕಾಲಿಕವಾಗಿ ಆನಂದ ನೀಡುವ ಮಾದಕ ದ್ರವ್ಯ, ವಸ್ತುಗಳ ಅವಲಂಬನೆಗೆ ಒಳಗಾಗುವುದನ್ನು ಹೆಚ್ಚಾಗಿ ಸಮಾಜದಲ್ಲಿ ಕಾಣುತ್ತಿದ್ದೇವೆ. ಸ್ನೇಹಿತರ ಒತ್ತಾಯ, ದೈಹಿಕ, ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಹೀಗೆ ಅನೇಕ ಕಾರಣಗಳಿಗಾಗಿ ಜನ ಮಾದಕ ವ್ಯಸನಿಗಳಿಗೆ ದಾಸರಾಗಿದ್ದಾರೆ. ಇಂಥ ಹವ್ಯಾಸ ಬಿಡಬೇಕು ಎಂದರು.
ಜೀವನದಲ್ಲಿ ಬರುವ ಕಷ್ಟಗಳನ್ನು ಕಂಡು ಎದೆಗುಂದಬಾರದು. ಇದರಿಂದ ಮಾದಕ ವಸ್ತುಗಳ ಸೇವನೆ ಕಡೆಗೆ ವಾಲುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾಥರ್ಿಗಳು ಜೀವನದಲ್ಲಿ ಬರುವ ಕಷ್ಟಗಳನ್ನು ಎದುರಿಸುತ್ತಲೇ ಉತ್ತಮ ಬದುಕು ರೂಪಿಸಿಕೊಳ್ಳಬೇಕು. ಒತ್ತಡ ಕಡಿಮೆಗೆ ಯೋಗ, ಪ್ರಾಣಾಯಾಮ ಮಾಡಬೇಕು. ಮಾದಕ ವಸ್ತುಗಳ ಮಾರಾಟ ಜಾಲ ಗಮನಕ್ಕೆ ಬಂದಲ್ಲಿ ತಕ್ಷಣ ಸಂಬಂಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಡಿಎಚ್ಒ ಡಾ.ರತಿಕಾಂತ ಸ್ವಾಮಿ ಮಾತನಾಡಿ, ಪಾಲಕರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ವಾತಾವರಣ ನಿರ್ಮಿಸಬೇಕು. ರಾಮಾಯಣ, ಮಹಾಭಾರತದಂಥ ಪೌರಾಣಿಕ ಕಥೆಗಳನ್ನು ತಿಳಿಸುವ ಮೂಲಕ ಸಂಸ್ಕಾರ ಬೆಳೆಸಬೇಕು ಎಂದು ಸಲಹೆ ನೀಡಿದರು.
ಅಬಕಾರಿ ಉಪ ಅಧೀಕ್ಷಕ ಆನಂದ ಉಕ್ಕಲಿ ಮಾತನಾಡಿ, ಇತ್ತೀಚೆಗೆ ಯುವಕರು ಮಾದಕ ವಸ್ತು ಸೇವನೆಗಳತ್ತ ಹೆಚ್ಚು ಮುಖ ಮಾಡುತ್ತಿರುವುದು ದೊಡ್ಡ ದುರಂತ ಎಂದು ಕಳವಳ ವ್ಯಕ್ತಪಡಿಸಿದರು.
ಬ್ರಿಮ್ಸ್ ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾ ಕುಣಕೇರಿ ಉಪನ್ಯಾಸ ನೀಡಿ, ಕೆಲವರು ಮಾದಕ ವಸ್ತುಗಳನ್ನು ಸೇವಿಸಿ ತಾವೇ ಕಾಯಿಲೆಗಳನ್ನು ತಂದುಕೊಳ್ಳುತ್ತಿದ್ದಾರೆ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಚಟಕ್ಕೆ ಒಳಗಾಗಿದ್ದವರು ತಕ್ಷಣ ಹೊರಬರಬೇಕು ಎಂದು ಹೇಳಿದರು.
ಗುರುನಾನಕ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಶಾಮಲ ವಿ.ದತ್ತಾ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಎಂ.ಪಾಟೀಲ್, ಜಿಲ್ಲಾ ಮಾನಸಿಕ ವಿಭಾಗದ ಮನೋಶಾಸ್ತ್ರಜ್ಞ ಮಲ್ಲಿಕಾರ್ಜುನ ಗುಡ್ಡೆ, ಡಾ.ಅಮಲ್ ಶರೀಫ್, ವೀರಶೆಟ್ಟಿ ಚನ್ನಶೆಟ್ಟಿ, ರೇಣುಕಾ, ಸೀಮಪ್ಪ ಬಿ.ಸರಕೊರೆ, ಜಿಲಾನಿ, ಶರಣಬಸಪ್ಪ, ಸಂಗಮೇಶ, ಪ್ರಮೋದ ರಾಠೋಡ್, ಪರಶುರಾಮ, ಅಂಬಾದಾಸ ಇತರರಿದ್ದರು.