ಚಿತ್ರದುರ್ಗ: ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ, ಬಳಕೆ ಬಗ್ಗೆ ತೀವ್ರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಘೆಇಣ್ಕಈ(ಘೆಚ್ಟ್ಚಟ ಇಟಟ್ಟಜ್ಞಿಠಿಜಿಟ್ಞ ್ಚಛ್ಞಿಠಿಛ್ಟಿ) ಸಭೆಯಲ್ಲಿ ಮಾತನಾಡಿ, ಶಾಲಾ, ಕಾಲೇಜು ಬಳಿ ಇಂಥ ಅಕ್ರಮ ಚಟುವಟಿಕೆ, ವಿದ್ಯಾರ್ಥಿಗಳ ವರ್ತನೆಯಲ್ಲಿ ಅನುಮಾನ ಕಂಡುಬಂದರೆ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಗಾಂಜಾ ಬೆಳೆ ಹಾಗೂ ಮಾರಾಟ ತಡೆಗೆ ಪೊಲೀಸರೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೂಂಬಿಂಗ್ ನಡೆಸಬೇಕು ಎಂದರು.
ಹಿರಿಯೂರು ತಾಲೂಕು ಕಂದಿಕೆರೆ ಪ್ರಾವಿಜನ್ ಸ್ಟೋರ್‌ವೊಂದಕ್ಕೆ ಮದ್ಯ ಸರಬರಾಜು ಮಾಡಿದ ಮದ್ಯದ ಅಂಗಡಿ ಲೈಸೆನ್ಸ್(ಸನ್ನದು)ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ವೈದ್ಯರ ಚೀಟಿ ಇಲ್ಲದೆ, ಪ್ರಲೋಭಕ ಔಷಧಗಳನ್ನು ಮಾರದಂತೆ ಜಿಲ್ಲೆಯ ಔಷಧ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದುಪಡಿಸಲು ಶಿಫಾರಸ್ಸು ಮಾಡುವಂತೆ ಜಿಲ್ಲಾ ಔಷಧ ನಿಯಂತ್ರಕರಿಗೆ ಡಿಸಿ ತಿಳಿಸಿದರು.
ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಮಾತನಾಡಿ, ಮಾದಕ ವ್ಯಸನ ಹಾಗೂ ಅಪರಾಧ ಕೃತ್ಯಗಳಿಗೆ ನೇರ ಸಂಬಂಧವಿದೆ. ಶಾಲಾ ಕಾಲೇಜುಗಳ ಪ್ರಾರಂಭದ ಬಳಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಬಳ್ಳಾರಿಯ ವ್ಯಕ್ತಿಯೊಬ್ಬ ಜಿಲ್ಲೆಯಲ್ಲಿ ಅನಧಿಕೃತವಾಗಿ 9 ಸಾವಿರ ಟಾಕ್ಸೆಕ್ಸ್ ಸಿರಪ್ ಸರಬರಾಜು ಮಾಡಿದ್ದು, ಈ ಜಾಲ 5 ವರ್ಷಗಳಿಂದ ಬಳ್ಳಾರಿ, ರಾಯದುರ್ಗ ಹಾಗೂ ಜಿಲ್ಲೆಯಲ್ಲಿ ಸಕ್ರಿಯವಾಗಿದೆ ಎಂದರು.
ನಾರ್ಕೋಟಿಕ್ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ವೆಂಕಟೇಶ್‌ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 40 ಹಾಗೂ ಪ್ರಸಕ್ತ ಸಾಲಿನಲ್ಲಿ 30 ಗಾಂಜಾ ಸೇವನೆ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ವಿವಿಧೆಡೆ ಗಾಂಜಾ ಬೆಳೆಯಲಾಗುತ್ತಿದ್ದು, ಇಲ್ಲಿ ಕೂಂಬಿಂಗ್ ನಡೆಸಲಾಗುವುದು. ಜಿಲ್ಲಾಸ್ಪತ್ರೆಯ ವ್ಯಸನ ಮುಕ್ತ ಕೇಂದ್ರದಲ್ಲಿ ಸಮರ್ಪಕ ಚಿಕಿತ್ಸೆಯ ಅಗತ್ಯವಿದೆ ಎಂದರು.
ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಎಸ್‌ಪಿ ಎಸ್.ಜೆ. ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್, ಜಿಲ್ಲಾ ಔಷಧ ನಿಯಂತ್ರಕ ಗಿರೀಶ್ ಮತ್ತಿತರರು ಇದ್ದರು.
ಕೋಟ್
ವೈದ್ಯರ ಶಿಫಾರಿಸ್ಸಿನ ಮೇರೆಗೆ ಪ್ರಲೋಭಕ ಔಷಧಗಳ ಖರೀದಿಗೆ ಆಧಾರ್‌ಕಾರ್ಡ್ ಪಡೆಯಬೇಕು. ಈ ಔಷಧಗಳ ಪ್ರಮಾಣದ ಲೆಕ್ಕ ವಿಡುವಂತೆ ಜಿಲ್ಲಾ ಔಷಧ ನಿಯಂತ್ರಕರು ಔಷಧ ಅಂಗಡಿಗಳ ಮಾಲೀಕರಿಗೆ ಸೂಚಿಸಿದರು.
ಎಸ್.ಜೆ. ಸೋಮಶೇಖರ್,ಸಿಇಒ,ಜಿಪಂ,ಚಿತ್ರದುರ್ಗ.
----