ಕಿಕ್ಕೇರಿ: ಹೋಬಳಿಯ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೋಟಹಳ್ಳಿ ನಂಜೇಗೌಡ, ಉಪಾಧ್ಯಕ್ಷರಾಗಿ ಗೂಡೆಹೊಸಹಳ್ಳಿ ಲೋಕೇಶ್ ಅವಿರೋಧವಾಗಿ ಆಯ್ಕೆಯಾದರು.
12 ನಿರ್ದೇಶಕರ ಬಲ ಹೊಂದಿರುವ ಸಂಘದ ಮುಂದಿನ 5ವರ್ಷದ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೋಟಹಳ್ಳಿ ನಂಜೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಗೂಡೆಹೊಸಹಳ್ಳಿ ಲೋಕೇಶ್ ಹೊರತುಪಡಿಸಿ ಬೇರ‌್ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಸಿಡಿಒ ಭರತ್‌ಕುಮಾರ್ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷ ಕೆ.ನಂಜೇಗೌಡ ಮಾತನಾಡಿ, ಶಾಸಕ ಎಚ್.ಟಿ.ಮಂಜು, ರಾಜ್ಯ ಮಾರಾಟ ಮಹಾ ಮಂಡಳಿ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ ಹಾಗೂ ಬಿ.ಎಂ.ಕಿರಣ್ ಮಾರ್ಗದರ್ಶನದಂತೆ ಸಂಘದ ಸರ್ವ ನಿರ್ದೇಶಕರು ಅವಿರೋಧವಾಗಿ ಆಯ್ಕೆಮಾಡಿದ್ದಾರೆ. ಸಂಘದ ಅಭಿವೃದ್ಧಿ, ರೈತರ ಸಮಸ್ಯೆಗೆ ಸ್ಪಂದಿಸಿ ಉತ್ತಮ ಸೊಸೈಟಿಯಾಗಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.
ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯಮಾಲೆ ಹಾಕಿ ವಿಜಯೋತ್ಸವ ಆಚರಿಸಿದರು.
ಮಾದಾಪುರ ಎಂ.ಕೆ.ರಾಮಕೃಷ್ಣೇಗೌಡ, ಮುಖಂಡರಾದ ಹೊನ್ನೇಗೌಡ, ದೇವೇಗೌಡ, ದಿವ್ಯಾ ಚಂದ್ರಶೇಖರ್, ಶೇಖರ್, ಮಾರ್ಗೋನಹಳ್ಳಿ ಮಂಜುನಾಥ್, ಶಂಕರಣ್ಣ, ಕಾಂತರಾಜು, ಸ್ವಾಮಿ, ಶಂಭಣ್ಣ, ಗೊಂದಿಹಳ್ಳಿ ತೋಪೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಕುಮಾರ್, ಗೂಡೆಹೊಸಹಳ್ಳಿ ಕೃಷ್ಣೇಗೌಡ, ಊಗಿನಹಳ್ಳಿ ರೂಪೇಶ್, ಮುರಳಿ, ಗುಂಡಣ್ಣ, ನಾಗರಾಜು, ಕೃಷ್ಣೇಗೌಡ ಮತ್ತಿತರರಿದ್ದರು.