filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 45; 
ಜಿಲ್ಲೆ

ಮಾದಿಗ ಸಮುದಾಯ ಒಗ್ಗಟ್ಟಾಗಲಿ

ಅಥಣಿ: ಮಾದಿಗ ಸಮುದಾಯ ಒಗ್ಗಟ್ಟಾದರೆ ಮಾತ್ರ ಎಲ್ಲ ಸೌಲಭ್ಯ ಪಡೆಯಲು ಸಾಧ್ಯ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಆಸ್ತಿಯನ್ನಾಗಿ ಬೆಳೆಸಬೇಕು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಪಟ್ಟಣದ ಗಚ್ಚಿನಮಠದ ಸಭಾಂಗಣದಲ್ಲಿ ಮೀಸಲಾತಿ ಹೋರಾಟ ಸಮಿತಿ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಮಾದಿಗರೂ ಶೋಷಿತ ಶ್ರಮಜೀವಿಗಳಾಗಿ ಬದುಕುತ್ತಿದ್ದರು. ಈಗ ಕಾಲ ಬದಲಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಾಕಷ್ಟು ಅವಕಾಶಗಳಿವೆ. ಸಮುದಾಯದ ಜನರು ಗುಂಪುಗಾರಿಕೆ ಮಾಡದೇ ಒಗ್ಗಟ್ಟಿನಿಂದ ಅಭಿವೃದ್ಧಿಗೆ ಶ್ರಮಿಸಬೇಕು. ಅಥಣಿಯಲ್ಲಿ ಮಾದಿಗ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಒಳಮಿಸಲಾತಿ ಸಮೀಕ್ಷೆ ನಡೆದಿದ್ದು, ಅಧಿಕಾರಿಗಳಿಗೆ ನಿಖರ ಮಾಹಿತಿ ನೀಡಬೇಕು. ಅಂದಾಗ ಮಾತ್ರ ಒಳಮೀಸಲಾತಿ ಸೌಲಭ್ಯ ದೊರೆಯಲಿದೆ. ಸಮುದಾಯದ ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದ ಅಭ್ಯುದಯಕ್ಕೆ ಮುಂದಾಗಬೇಕು. ಶಿಕ್ಷಣದಿಂದ ವಂಚಿತವಾದ ಸಮುದಾಯ ಸಮಾಜದಿಂದ ಹಿಂದುಳಿಯುತ್ತದೆ. ಅಥಣಿ ಪಟ್ಟಣದಲ್ಲಿ ಮಾದಿಗ ಸಮುದಾಯ ಭವನ ನಿರ್ಮಿಸಲಾಗುವುದು. ತಾಲೂಕಿನ ೯ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಚಿವ ತಿಮ್ಮಾಪುರ ಅವರಿಂದ ನೆರವೇರಿಸಲಾಗುವುದು ಎಂದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಾಂಗ್ಲಾದೇಶದಲ್ಲಿ ಜರುಗಿದ ಅಟ್ಯಾಪಟ್ಯಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಬಸವರಾಜ ತೆಳಗಡೆ ಅವರನ್ನು ಸತ್ಕರಿಸಲಾಯಿತು.

ಯರನಾಳದ ಬ್ರಹ್ಮನಾಂದ ಸ್ವಾಮೀಜಿ, ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ, ತಹಸೀಲ್ದಾರ್ ಸಿದರಾಯ ಭೋಸಗಿ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಸಮಾಜಕಲ್ಯಾಣ ಅಧಿಕಾರಿ ಬಸವರಾಜ ಯಾದವಾಡ, ಗಣ್ಯರಾದ ಗಿರೀಶ ಬುಟಾಳೆ, ರಾವಸಾಹೇಬ ಐಹೊಳೆ, ಶ್ಯಾಮ ಪೂಜಾರಿ, ಸಿದ್ದಾರ್ಥ ಸಿಂಗೆ, ರಮೇಶ ಸಿಂಧಗಿ, ಸುನೀಲ ಸಂಕ, ಹನುಮಂತ ಅರ್ಧಾವೂರ, ರಾಜು ಐಹೊಳೆ, ಹನುಮಂತ ಐಹೊಳೆ ಇತರರು ಇದ್ದರು.

ಹನ್ನೆರಡನೇ ಶತಮಾನದಿಂದಲೂ ಮಾದಿಗರಿಗೆ ವಿಶೇಷ ಸ್ಥಾನಮಾನವನ್ನು ಬಸವಣ್ಣವರು ನೀಡಿದ್ದಾರೆ. ಅದೇ ರೀತಿ ಇಂದು ಮಾದಾರ ಚನ್ನಯ್ಯ ಸ್ವಾಮೀಜಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹುಬ್ಬಳ್ಳಿ ಹತ್ತಿರ ಬೃಹತ್ ಕಲ್ಯಾಣ ಮಂಟಪ, ಸಮುದಾಯ ಭವನ, ಯಾತ್ರಿ ನಿವಾಸ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ಹೆಮ್ಮೆ ವಿಷಯ. | ಶಿವಬಸವ ಸ್ವಾಮೀಜಿ ಗಚ್ಚಿನಮಠ ಅಥಣಿ