ಬಾಗಲಕೋಟೆ: ಸಂವಿಧಾನವು ನೀಡಿರುವ ಹಕ್ಕುಗಳ ಬಗ್ಗೆ ಮಾತ್ರ ಎಲ್ಲರೂ ಮಾತನಾಡುತ್ತಾರೆ ಹೊರತು ಕರ್ತವ್ಯಗಳ ಕುರಿತಲ್ಲ. ಕರ್ತವ್ಯಗಳನ್ನು ಅರಿತು ಅವುಗಳನ್ನು ಅಳವಡಿಸಿಕೊಂಡಾಗ ಮಾತ್ರ ಮಾನವ ಹಕ್ಕುಗಳು ಸಂಪೂರ್ಣವಾಗಿ ಜಾರಿಯಾಗಲು ಸಾಧ್ಯವಾಗುತ್ತದೆ ಎಂದು ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ, ಮಾನವ ಹಕ್ಕುಗಳ ಸಮಿತಿ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೆ ನೈಸರ್ಗಿಕವಾಗಿ ಬಂದಂತಹ ಹಕ್ಕುಗಳನ್ನು ಚಲಾಯಿಸುವದರ ಜೊತೆಗೆ ಅವುಗಳ ಉಲ್ಲಂಘನೆಯಾಗದಂತೆ ನೋಡುಕೊಳ್ಳುವ ಜವಾಬ್ದಾರಿ ನಮ್ಮೇಲ್ಲರದ್ದಾಗಿದೆ ಎಂದರು.
ಮಾನವ ಹಕ್ಕುಗಳನ್ನು ರಕ್ಷಿಸುವುದು ಕೇವಲ ಒಬ್ಬ ವ್ಯಕ್ತಿಯಿಂದ ಸಾಧ್ಯವಿಲ್ಲ. ಎಲ್ಲರೂ ಅವುಗಳನ್ನು ಅರಿತು ಅಳವಡಿಸಿಕೊಂಡಾಗ, ಕಷ್ಟದಲ್ಲಿರುವ ವ್ಯಕ್ತಿಗೆ ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ಸಹಾಯ ಮಾಡಿದಾಗ ಮಾನವ ಹಕ್ಕುಗಳನ್ನು ರಕ್ಷಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ವಕೀಲ ಬಿ.ಡಿ.ಪಾಟೀಲ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾತನಾಡಿದರು. ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹೇಮಾ ಪಸ್ತಾಪುರ, ಅಪರ ಜಿಲ್ಲಾಧಿಕಾರಿ ಮಾಹಾದೇವ ಮುರಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಪೂಜಾರ, ಉಪ ವಿಭಾಗಾಽಕಾರಿ ಶ್ವೇತಾ ಬೀಡಿಕರ್ ಸೇರಿದಂತೆ ಇತರರು ಇದ್ದರು.