ಜಿಲ್ಲೆ

ಮಾನಸಿಕ ಒತ್ತಡ ನಿರ್ವಹಣೆಗೆ ಸಲಹೆ

ಬೆಳಗಾವಿ: ಇಲ್ಲಿನ ಕೆಎಲ್‌ಇ ವೇಣುಧ್ವನಿ 90.4 ಎಫ್.ಎಂ., ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ಗುರುವಾರ ‘ಮಾನಸಿಕ ಒತ್ತಡ ನಿರ್ವಹಣೆ’ ವಿಷಯ ಕುರಿತು ನೇರ ೆನ್ ಇನ್ ಕಾರ್ಯಕ್ರಮ ನಡೆಯಿತು.

ಬೆಳಗ್ಗೆ 10ರಿಂದ 11ಗಂಟೆ ವರೆಗೆ ನಡೆದ ಕಾರ್ಯಕ್ರಮದಲ್ಲಿ ಮಾನಸಿಕ ಒತ್ತಡ ನಿರ್ವಹಣೆ ಕುರಿತಂತೆ ಕೇಳುಗರ ಪ್ರಶ್ನೆಗಳಿಗೆ ಕೆಎಲ್‌ಇ ಆಸ್ಪತ್ರೆಯ ಮನೋವೈದ್ಯ ಡಾ. ಭೀಮಸೇನ ಟೆಕ್ಕಳಕಿ ಉತ್ತರಿಸಿದರು. ಮಾನಸಿಕ ಒತ್ತಡ ಎಂದರೇನು? ಒತ್ತಡಕ್ಕೆ ಕಾರಣಗಳು?, ಹೇಗೆ ನಿಭಾಯಿಸುವುದು ಎಂದು ಒತ್ತಡದಿಂದ ಮನುಷ್ಯನ ಆರೋಗ್ಯದ ಮೇಲಾಗುವ ಪರಿಣಾಮಗಳ ಕುರಿತು ವಿವರಿಸಿದರು.

ಉದ್ಯೋಗಿಗಳಲ್ಲಿ ಖಿನ್ನತೆ ಮತ್ತು ಕೀಳರಿಮೆಯಂತಹ ಸಮಸ್ಯೆಗಳು ಹೆಚ್ಚುತ್ತಿರುವುದ ಜಾಗೃತಿ ಮೂಡಿಸುವುದು ಅವಶ್ಯ. ಅತಿಯಾದ ಮಾನಸಿಕ ಒತ್ತಡದಿಂದ ಅನೇಕರು ದುಶ್ಟಚಟಗಳಿಗೆ ಬಲಿಯಾಗುತ್ತಿದ್ದಾರೆ. ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳುವುದರಿಂದ ದೂರವಿರಬಹುದು ಎಂದು ಜಾಗೃತಿ ಮೂಡಿಸಿದರು.

ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಲಭ್ಯವಿರುವ ಮಾನಸಿಕ ಆರೋಗ್ಯ ಚಿಕಿತ್ಸೆಗಳ ಕುರಿತು ಮಾಹಿತಿ ಹಂಚಿಕೊಂಡು, ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನೀಷ ಪಿ.ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು..