ಜಿಲ್ಲೆ

ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಚಿಕ್ಕೋಡಿ : ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ

ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಶಹಾಬಂದರ ಗ್ರಾಮದ ನಿವಾಸಿ ಮಹಾಂತೇಶ್ ಬುಕನಟ್ಟಿ(24) ಕೊಲೆಯಾದ ಯುವಕ.ಈತ ಬೆಳಗಾವಿ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ, ಕೆಲಸ ಮುಗಿಸಿಕೊಂಡು ಗ್ರಾಮದಲ್ಲಿ ಬಸ್ ಇಳಿದು ಮನೆಗೆ ಹೋಗುತ್ತಿರುವಾಗಲೇ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಹತ್ಯೆ ಮಾಡಿದ್ದಾರೆ.

ಯುವಕನ ಬರ್ಬರ ಹತ್ಯೆಯಿಂದ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಕೊಲೆಗೆ ಅನೈತಿಕ ಸಂಬಂಧ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಯಮಕನಮರಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.