ಜಿಲ್ಲೆ

ಮಾರ್ಚ್ 10ರಿಂದ ಆಲೂರು ತಾಲೂಕು ಸಮ್ಮೇಳನ

reportermys

ಹಾಸನ : ಆಲೂರು ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ 10 ರಂದು ಆಲೂರು ತಾಲ್ಲೂಕು ಕುಂದೂರು ಗ್ರಾಮದ ಚನ್ನಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಸ್.ಗೋಪಾಲಕೃಷ್ಣ ಅವರು ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಅಧ್ಯಕ್ಷರನ್ನಾಗಿ ಶಿಕ್ಷಕರು, ಸಾಹಿತಿಗಳಾಗಿರುವ ವೇದಾವತಿ ಶಿವಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮಾರ್ಚ್ 10 ರಂದು ಬೆಳಿಗ್ಗೆ 8.30ಕ್ಕೆ ಕುಂದೂರು ಗ್ರಾಮ ಚನ್ನಾಪುರದಮ್ಮ ದೇವಸ್ಥಾನ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರ ಧ್ವಜಾರೋಹಣವನ್ನು ತಾಲ್ಲೂಕು ದಂಡಾಧಿಕಾರಿಗಳಾದ ಮೇಘನಾ, ನಾಡ ಧ್ವಜಾರೋಣವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣವನ್ನು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎ.ಎನ್.ಗೋಪಾಲಕೃಷ್ಣ ಅವರು ನೆರವೇರಿಸುವರು ಎಂದು ತಿಳಿಸಿದರು.

ಬೆಳಿಗ್ಗೆ 9.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕುಂದೂರು ನಾರಾಯಣಸ್ವಾಮಿ ದೇವಸ್ಥಾನದದಿಂದ ಚನ್ನಾಪುರದ ಆಂಜನೇಯಸ್ವಾಮಿ ದೇವಸ್ಥಾನದ ವರೆಗೆ ನಡೆಯಲಿದೆ. ಮೆರವಣಿಗೆಗೆ ಆಲೂರು ಠಾಣೆಯ ವೃತ್ತ ನಿರೀಕ್ಷರಾದ ಎಸ್.ಗಂಗಾಧರ್ ಅವರು ಚಾಲನೆ ನೀಡುವರು.

ಬೆಳಿಗ್ಗೆ 10.30ಕ್ಕೆ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕಾರ್ಜುವಳ್ಳಿ ಹಿರೇಮಠದ ಶ್ರೀ ಸದಾಶಿವ ಶಿವಾರ್ಚಾರ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ವಿಶ್ರಾಂತ ಅಧ್ಯಕ್ಷರಾದ ಡಾ.ಕಳೇಗೌಡ ನಾಗವಾರ ಅವರು ಸಮ್ಮಳನವನ್ನು ಉದ್ಘಾಟನೆ ನೆರವೇರಿಸುವರು. ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರು ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಹೆಚ್.ಎಲ್.ಮಲ್ಲೇಶಗೌಡ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷರಾದ ಹೆಚ್.ಬಿ.ಮದನ್‌ಗೌಡ ಅವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಕೃತಿ ಬಿಡುಗಡೆಯನ್ನು ಕಸಾಪ ತಾಲ್ಲೂಕು ಅಧ್ಯಕ್ಷರಾದ ಎ.ಎಸ್.ಗೋಪಾಲಕೃಷ್ಣ ಅವರು ನೆರವೇರಿಸುವರು ಮುಖ್ಯ ಅತಿಥಿಗಳಾಗಿ ಜಿಲ್ಲಾ ಮತ್ತು ಪ್ರದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷರಾದ ಜೆ.ಆರ್.ಕೆಂಚೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಮಂಜೇಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವೇದಾ ಸುರೇಶ್ ಸೇರಿಂದತೆ ಇತರು ಆಗಮಿಸುವರು

ಮಧ್ಯಾಹ್ನ 12.30 ರಿಂದ 1.30ರ ವರೆಗೆ ವಿಚಾರ ಗೋಷ್ಠಿಗಳು ನಡೆಯಲಿದ್ದು, ಮಕ್ಕುಂದೂರು ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಅವರ ಅಧ್ಯಕ್ಷತೆಯಲ್ಲಿ ಪರಿಸರವಾದಿ ಹೆಚ್.ಪಿ.ಮೋಹನ್ ಅವರು ‘ಮಲೆನಾಡು ಪರಿಸರ ಮತ್ತು ಪ್ರಸ್ತುತ ಸವಾಲುಗಳು’ ವಿಷಯ ಮಂಡನೆ ಮಾಡಲಿದ್ದಾರೆ. ಉಪನ್ಯಾಸಕರಾದ ಡಾ.ಲೋಕೇಶ್ ಅವರು ಆಧುನಿಕ ತಂತ್ರಜ್ಞಾನ ಮತ್ತು ಅರಿವಿನ ಎಚ್ಚರ ವಿಷಯ ಮಂಡನೆ ಮಾಡಲಿದ್ದಾರೆ.

ಮಧ್ಯಾಹ್ನ 2.30 ರಿಂದ 2.30ರ ವರೆಗೆ ಕವಿಗೋಷ್ಠಿ ನಡೆಲಿದ್ದು, ಹೊಳೆನರಸೀಪುರ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಕುಸುಮ ಮುರುಳೀಧರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕವಿಗಳಾದ ವಾಸು, ಚಂದ್ರಕಲಾ, ಆರ್.ಲಿಲಾವತಿ, ಟಿ.ಕೆ.ನಾಗರಾಜು, ಸತ್ಯನಾರಾಯಣ, ಕೃಷ್ಣೇಗೌಡ, ಪವನ್, ಧರ್ಮ, ಅನಿಲ್, ಪಿ.ಚಂದ್ರು, ಹೆಚ್.ಟಿ.ಚಿಂತನ್ ಅವರು ಭಾಗವಹಿಸುವರು. ಮಧ್ಯಾಹ್ನ 30.30 ರಿಂದ 5.30ರ ವರೆಗೆ ಸಂಗೀತ ಸುಧೆ ಸಾಂಸಕೃತಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸಂಜೆ 5.30ಕ್ಕೆ ಸಮಾರೋಪ ಕಾರ್ಯಕ್ರಮದಲ್ಲಿ ಹಿರಿಯ ಹಾಸ್ಯ ಸಾಹಿತಿ ಪ್ರೊ.ಎಂ.ಕೃಷ್ಣೇಗೌಡ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಉದ್ಯಮಿ ಅನಂತ ಕುಮಾರ್ ಅವರು ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷರಾದ ಡಾ.ಹೆಚ್.ಎಲ್.ಮಲ್ಲೇಶಗೌಡ ಅವರು ಉಪಸ್ಥಿತರಿರಲಿದ್ದಾರೆ. ಸಮ್ಮೇಳನದಲ್ಲಿ 26 ಸಾಧಕರಿಗೆ ಹಾಗು ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ 33 ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಸದಸ್ಯರಾದ ಕೆ.ಎಸ್.ಮಜೇಗೌಡ, ತನುಗೌಡ, ಸಿ.ಎಸ್.ಚಿದಾನಂದ, ಆಶೋಕ್, ಚಂದ್ರಶೇಖರ್ ಹಾಜರಿದ್ದರು.