ಗೋಣಿಕೊಪ್ಪ: ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಹಾಗೂ ಹುಂಡಿ ಯೂತ್‌ಫ್ರೆಂಡ್ಸ್ ಸಹಯೋಗದಲ್ಲಿ ಮಾರ್ಚ್ 16 ಮತ್ತು 17ರಂದು ಹುಂಡಿ ಗ್ರಾಮದಲ್ಲಿ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಟೂರ್ನಿ ಸಂಚಾಲಕ ಶಾಫಿ ಮಂಗಳವಾರ ತಿಳಿಸಿದ್ದಾರೆ.
ದೇಶದ 8 ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುತ್ತಿದ್ದು, ವೀಕ್ಷಕರಿಗೆ ತೀವ್ರ ಕುತೂಹಲ ಮೂಡಿಸಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾರ್ಚ್ 10ರ ಒಳಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ರೊಟೇಶನ್ ನಿಯಮದಲ್ಲಿ ಪಂದ್ಯಗಳು ನಡೆಯಲಿವೆ. ಗ್ಯಾಲರಿಯಲ್ಲಿ ವೀಕ್ಷಕರಿಗೆ ಕೂರಲು ಅವಕಾಶ ಮಾಡಿಕೊಡಲಾಗಿದೆ. ಒಟ್ಟು 1.50 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಯುವಕರ ಶ್ರಮದಾನದಿಂದ ಸುಮಾರು 3.5 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದಲ್ಲಿ ಮೊದಲ ಬಾರಿಗೆ ನೂತನವಾಗಿ ಮೈದಾನ ಸಜ್ಜುಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 91485 44300, 82967 58762 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಎಸ್. ಶಮೀರ್, ಹುಂಡಿ ಯೂತ್ ಫ್ರೆಂಡ್ಸ್ ಅಧ್ಯಕ್ಷ ರಫಿ ಇದ್ದರು.